Latest

ಮಳೆಯ ತೀವ್ರತೆಗೆ ಓಕಳಿಪುರಂನಲ್ಲಿ ಮನೆಮೇಲೆ ಉರುಳಿದ ಮರ : ಮೂವರು ಗ್ರೇಟ್‌ ಎಸ್ಕೇಪ್

ಸಿಲಿಕಾನ್ ಸಿಟಿ ಬೆಂಗಳೂರು ಎರಡು ದಿನಗಳಿಂದ ನಿರಂತರ ಮಳೆ ಮತ್ತು ಗಾಳಿಯಿಂದ ತತ್ತರಿಸಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಓಕಳಿಪುರಂನಲ್ಲಿ ಭಾನುವಾರದ ಸಂಜೆ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮನೆಮೇಲೆ ಉರುಳಿ ಬಿದ್ದು ಭೀತಿ ಸೃಷ್ಠಿಸಿದೆ.

ಅಪಘಾತ ಸಂಭವಿಸಿದಾಗ ಮನೆಯೊಳಗೆ ಮೂವರು ವ್ಯಕ್ತಿಗಳು ಇದ್ದರು. ಮರ ಬಿದ್ದು ಬಡಿದ ತಕ್ಷಣವೇ ಅವರು ಕೂಡಲೇ ಎಚ್ಚರಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಪರಿಣಾಮ ಯಾವುದೇ ಪ್ರಾಣಹಾನಿ ತಪ್ಪಿದ್ದು, ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.

ಮರದ ಭಾರಕ್ಕೆ ಆರ್‌ಸಿಸಿ ಕಟ್ಟಡದ ಗೋಡೆಗೆ ತೀವ್ರ ಹಾನಿಯಾಗಿದೆ. ಮನೆಬದಿಯ ಭಾಗ ಸಂಪೂರ್ಣ ಜಖಂ ಆಗಿದ್ದು, ಮನೆಯ ವಾಸಸ್ಥಿತಿಗೆ ತೊಂದರೆಯಾಗಿರುವುದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪಾಲಿಕೆ ಸಿಬ್ಬಂದಿ ತಕ್ಷಣ ಧಾವಿಸಿ ಮರ ತೆಗೆಯುವ ಕಾರ್ಯವನ್ನು ಆರಂಭಿಸಿದ್ದಾರೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿರುವ ಹಳೆಯ ಮರಗಳು ಅಪಾಯಕಾರಿಯಾಗಿವೆ ಎಂದು ಅವರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳಲಾಗದೆ ಇದ್ದ ಪರಿಣಾಮ ಈ ರೀತಿಯ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago