Crime

ಸರ್ಕಾರಿ ಉದ್ಯೋಗದ ನಂಬಿಕೆ: ನರ್ಸ್‌ಗೆ 1.65 ಲಕ್ಷ ರೂ. ವಂಚನೆ, ಉಡುಪಿಯಲ್ಲಿ ಪ್ರಕರಣ ದಾಖಲು

ಉಡುಪಿ: ಸರ್ಕಾರಿ ಉದ್ಯೋಗದ ಭರವಸೆ ನೀಡಿ ನರ್ಸ್‌ಗೊಬ್ಬರ ಕೈಯಿಂದ ಲಕ್ಷಕ್ಕೂ ಹೆಚ್ಚು ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ ಮೂಲದ ರೇವತಿ (31) ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಲಸ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಪಡುಬಿದ್ರಿಯ ಸಚಿನ್ ಎಂಬಾತನ ಪರಿಚಯವಾಗಿತ್ತು. ಆತನು ತನ್ನನ್ನು ಸರ್ಕಾರಿ ನೌಕರಿ ಹೊಂದಿಸಬಲ್ಲ ವ್ಯಕ್ತಿಯಾಗಿ ಪರಿಚಯಿಸಿಕೊಂಡಿದ್ದನು.

ಸಚಿನ್, “ಮೇಲಾಧಿಕಾರಿಗಳಿಗೆ ಹಣ ನೀಡಬೇಕು, ನಂತರ ನೌಕರಿ ಪಕ್ಕಾ” ಎಂಬ ಮಾತುಗಳನ್ನು ನಂಬಿಸಿ, ಹಂತ ಹಂತವಾಗಿ 2024ರ ಏಪ್ರಿಲ್ 11ರಿಂದ ಮೇ 20ರವರೆಗೆ ರೇವತಿ ಅವರಿಂದ ಒಟ್ಟು ರೂ. 1,65,000 ಹಣ ಸ್ವೀಕರಿಸಿದ್ದಾನೆ ಎಂಬುದು ದೂರುದಾರೆಯ ವಾದ.

ಈಷ್ಟೇ ಅಲ್ಲದೆ, ಉದ್ಯೋಗದ ಪ್ರಕ್ರಿಯೆಗೆ ಅಗತ್ಯವಿದೆ ಎಂಬ ಕಾರಣದಿಂದಾಗಿ ರೇವತಿಯ ಪಾನ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣಪತ್ರ, ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ, ನರ್ಸಿಂಗ್ ಡಿಪ್ಲೊಮಾ ಸೇರಿದಂತೆ ಎಲ್ಲಾ ಮೂಲ ದಾಖಲೆಗಳನ್ನು ಕೂಡ ಪಡೆಯಲಾಗಿತ್ತು.

ಆದರೆ ಇಷ್ಟು ದಿನ ಕಳೆದರೂ ಯಾವುದೇ ರೀತಿಯ ಸರ್ಕಾರಿ ಉದ್ಯೋಗ ನೀಡದೇ, ಹಣ ಹಾಗೂ ದಾಖಲಾತಿಗಳನ್ನು ಕೂಡ ಹಿಂದಿರುಗಿಸದೇ ಮೋಸಮಾಡಿರುವುದಾಗಿ ದೂರಲಾಗಿದೆ. ಈ ಸಂಬಂಧ ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

3 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago