Latest

ಭಾರತದಿಂದ ಸಹಾಯ ಪಡೆದು ಭಾರತಕ್ಕೆ ಚೂರಿ ಹಾಕಲು ನಿಂತ ಟರ್ಕಿ; ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ.

ಭೀಕರ ಭೂಕಂಪದಿಂದ ಕಂಗೆಟ್ಟು ಹೋಗಿರೋ ಟರ್ಕಿಗೆ ಭಾರತ ಅಪಾರ ಸಹಾಯ ಹಸ್ತ ಚಾಚಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆಪರೇಷನ್​ ದೋಸ್ತಿ ಹೆಸರಿನಲ್ಲಿ ಭಾರತದ ಸೇನೆ ಟರ್ಕಿಗೆ ತೆರಳಿ ಅಲ್ಲಿರುವ ಜನರ ಜೀವವನ್ನು ಕಾಪಾಡಿದೆ. ಮಾತ್ರವಲ್ಲದೇ ಎನ್‌ಡಿಆರ್‌ಎಫ್ ಯೋಧರನ್ನು ಕಳುಹಿಸಿದೆ. ಅಗತ್ಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳ ಜೊತೆಗೆ ತರಬೇತಿ ಪಡೆದ ಶ್ವಾನ ತಂಡವನ್ನು ಕಳುಹಿಸಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಇಷ್ಟೆಲ್ಲಾ ಮಾಡಿದ ಮೇಲೂ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್(ಒಐಸಿ) ನಲ್ಲಿ, ಟರ್ಕಿಯು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ ಭಾರತದ ವಿರೋಧ ನಿಂತಿದೆ.
ಭಾರತದಿಂದ ಭಾರಿ ನೆರವು ಪಡೆದ ವಾರದ ನಂತರದಲ್ಲಿಯೇ ಟರ್ಕಿ ಭಾರತದ ವಿರುದ್ಧ ಹೇಳಿಕೆ ನೀಡಿದೆ. ಜಿನೀವಾದಲ್ಲಿ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್​ನಲ್ಲಿ ಟರ್ಕಿಯು, ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಪ್ರಸ್ತಾಪಿಸಿದೆ. ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಖಂಡಿಸಿದ್ದಾರೆ. ಒಐಸಿ ಈಗಾಗಲೇ ಈ ವಿಷಯದ ಕುರಿತು ಚರ್ಚಿಸಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಈ ಮೂಲಕ ಕೋಮುವಾದ, ಪಕ್ಷಪಾತದಂಥ ಕಾರ್ಯ ಎಸಗುತ್ತಿದೆ ಎಂದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago