ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಂಗಪ್ಪ ಮೇಟಿ ವಿರುದ್ಧ ಗಂಭೀರ ಸೇವಾ ಲೋಪದ ಆರೋಪ ಎದುರಾಗಿದೆ. ಪ್ರಕರಣದ ತನಿಖೆ ಬಳಿಕ ಜಿಲ್ಲೆ ಎಸ್‌ಪಿ ಅಶೋಕ್ ಕೆ.ವಿ. ಅವರು ಮೇಟಿಯವರನ್ನು ಅಮಾನತುಗೊಳಿಸಿದ್ದಾರೆ.
ಆರೋಪಗಳ ಪ್ರಕಾರ, ಒಂದು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದ ಎಸ್‌ಐ ಸಂಗಪ್ಪ ಮೇಟಿ, ಆ ಫೋನ್‌ನ ಪಾಸ್‌ವರ್ಡ್ ಹಾಗೂ ಫೋನ್‌ಪೇ ಖಾತೆಯ ಮಾಹಿತಿಯನ್ನು ಪಡೆದು, ಅದರ ಮೂಲಕ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಆರೋಪಿಯ ಖಾತೆಯಿಂದ ಸುಮಾರು ರೂ. 95,000 ಹಣವನ್ನು ಫೋನ್‌ಪೇ ಬಳಸಿ ತಮ್ಮ ಸ್ವಂತ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಘಟನೆಯ ಇನ್ನೊಂದು ತೀವ್ರ ಸಂಗತಿ ಅಂದರೆ, ಆರೋಪಿಯನ್ನು ಜೈಲಿಗೆ ಕಳುಹಿಸಿದ ನಂತರವೂ ಅವರ ಮೊಬೈಲ್ ಅನ್ನು ಬಳಸಿ ಹಣ ವರ್ಗಾವಣೆ ನಡೆಸಲಾಗಿದೆ ಎನ್ನಲಾಗಿದೆ. ಆರೋಪದ ಕುರಿತು ಪ್ರಾಥಮಿಕ ತನಿಖೆ ನಡೆಸಿದ ಜಿಲ್ಲಾ ಎಸ್‌ಪಿ, ಆರೋಪಗಳು ವಿಶ್ವಾಸಾರ್ಹವಾಗಿವೆ ಎಂದು ನಂಬಿ, ಸಬ್ ಇನ್ಸ್‌ಪೆಕ್ಟರ್ ಮೇಟಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಬೆಳವಣಿಗೆ ತುಮಕೂರು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ನಂಬಿಕೆಯ ಕೊರತೆಯನ್ನು ಉಂಟುಮಾಡಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…