ಬಂಗಾರಪೇಟೆ : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ. 80,000/- ಮೌಲ್ಯದ 1ಕೆ.ಜಿ 10ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು, ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿ ಆಧರಿಸಿ, ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆರ್. ದಯಾನಂದ್ ಮತ್ತು ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಭುವನಹಳ್ಳಿ ಗ್ರಾಮದ ವಾಸಿ ನಾಗರಾಜ್ ಮತ್ತು ವೆಂಕಟಾಪುರ ಗ್ರಾಮದ ವಾಸಿ ರಾಮಪ್ಪ ಎಂಬುವರನ್ನು ಬಂಧಿಸಿ, ಅವರಿಂದ ಸುಮಾರು ರೂ. 80,000/- ಮೌಲ್ಯದ 1ಕೆ.ಜಿ. 10ಗ್ರಾಂ ಗಾಂಜಾ ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಿ.ವೈ.ಎಸ್.ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಗಾಂಜ ವಶಪಡಿಸಿಕೊಳ್ಳುವಲ್ಲಿ ಪಿ.ಐ ಆರ್.ದಯಾನಂದ್, ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳಾದ ಗಜೇಂದ್ರ, ಮಂಜುನಾಥ್, ವಿಜಯ್ ಕುಮಾರ್, ಸಂತೋಷ್ ಸಿದ್ದಾಪುರ ಮತ್ತು ಅಸ್ಲಂ, ಮತ್ತು ಜೀಪ್ ಚಾಲಕರಾದ ಪ್ರದೀಪ್ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಶ್ಲಾಘಿಸಿದ್ದಾರೆ.
ವರದಿ- ರೋಷನ್ ಜಮೀರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…