ಬಂಗಾರಪೇಟೆ : ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಚಿನ್ನದ ಆಭರಣಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದೂರುದಾರರಾದ ಬಂಗಾರಪೇಟೆ ವಾಸಿ ಸುಕನ್ಯಾ ಮತ್ತು ಬೊಪ್ಪನಹಳ್ಳಿ ವಾಸಿ ಬೀರಪ್ಪ ಎಂಬುವರು ಬಂಗಾರಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಚಿನ್ನದ ಆಭರಣಗಳನ್ನು ಅಡವಿಡಲು ಬಂದು ಡಿ.ಡಿ ಫಾರ್ಮ್ ಬರೆಸುತ್ತಿರುವಾಗ ಕಳ್ಳರು ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೇ25 ರಂದು ಕಳ್ಳತನ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಡಿವೈಎಸ್ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪಿ.ಐ ಆರ್.ದಯಾನಂದ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಪ್ರಕಾಶ್ ನರಸಿಂಗ್ ಮತ್ತು ಅವರ ತಂಡದವರು ಬಂಗಾರಪೇಟೆ ವಾಸಿಗಳಾದ ರಾಣಿ ಯಮ್ಮ ಮತ್ತು ಷೇಕ್ ಶಬ್ರಿನ್ ಎಂಬುವರನ್ನು ಬಂಧಿಸಿ, ಆರೋಪಿಗಳಿಂದ ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಿ.ವೈ.ಎಸ್ಪಿ ಎಸ್.ಪಾಂಡುರಂಗ, ಬಂಗಾರಪೇಟೆ ಪಿ.ಐ ಆರ್.ದಯಾನಂದ್ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬಂಗಾರಪೇಟೆ ಪಿ.ಎಸ್.ಐ ಪ್ರಕಾಶ್ ನರಸಿಂಗ್, ಸಿಬ್ಬಂದಿಗಳಾದ ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್ ಮತ್ತು ಮುನೇಂದ್ರ ರವರ ಉತ್ತಮ ಕೆಲಸವನ್ನು ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ರವರು ಶ್ಲಾಘಿಸಿದ್ದಾರೆ.
ವರದಿ: ರೋಶನ್ ಜಮೀರ್
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…