Latest

ಸರ್ಕಾರಿ ಕೆಲಸ ನೀಡುವುದಾಗಿ ನಂಬಿಸಿ ವಂಚನೆ – ಇಬ್ಬರು ಕಾನ್‌ಸ್ಟೆಬಲ್‌ ಅಮಾನತು

ಮಂಡ್ಯ: ಸರ್ಕಾರಿ ಹುದ್ದೆ ನೀಡುವುದಾಗಿ ಭರವಸೆ ನೀಡಿದ ನಟೆಯಲ್ಲಿ ಅಮಾಯಕ ನಿರುದ್ಯೋಗಿಗಳನ್ನು ಲಕ್ಷಾಂತರ ರೂಪಾಯಿಗೆ ವಂಚಿಸಿದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಅಮಾನತುಗೊಂಡವರು ಮಂಡ್ಯ ಗ್ರಾಮಾಂತರ ಠಾಣೆಯ ಕಾನ್‌ಸ್ಟೆಬಲ್ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಕಾನ್‌ಸ್ಟೆಬಲ್ ಲೋಕೇಶ್ ಎಂದು ಗುರುತಿಸಲಾಗಿದೆ. ಈ ಇಬ್ಬರು, ಈಗಾಗಲೇ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ವೆಂಕಟೇಶ್ ಎಂಬಾತನೊಂದಿಗೆ ಸಂಪರ್ಕದಲ್ಲಿದ್ದ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಉದ್ಯೋಗದ ಆಸೆ ಹುಟ್ಟುಹಾಕಿ ಯುವಕರಿಂದ ಹಣ ಪಡೆದು ವಂಚನೆ ನಡೆಸಿದ ವೆಂಕಟೇಶಗೆ ಈ ಇಬ್ಬರು ಕಾನ್‌ಸ್ಟೆಬಲ್‌ಗಳು ನೆರವಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲೆದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಚುರುಕುಗೊಂಡಿರುವ ಕೋಟ್ಯಂತರ ರೂಪಾಯಿಯ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ಕೆಲವು ಶಂಕಿತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಯುತ್ತಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

20 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago