Latest

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ದುರ್ಮರಣ

ಚಾಮರಾಜನಗರ ಜಿಲ್ಲೆ, ಹನೂರು: ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.

ಸೋಮವಾರ ಗಸ್ತು ನಡೆಸುತ್ತಿದ್ದ ಅರಣ್ಯ ಸಿಬ್ಬಂದಿ, ಅರಣ್ಯದೊಳಗೆ ಗಂಡು ಹುಲಿ ಮರಿಯ ಕಳೇಬರವನ್ನು ಪತ್ತೆಹಚ್ಚಿದರು. ತಕ್ಷಣವೇ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಬೆಳಿಗ್ಗೆ, ಘಟನಾ ಸ್ಥಳದ ಸಮೀಪದಲ್ಲಿ ಕೂಂಬಿಂಗ್ ಕಾರ್ಯಾಚರಣೆ ವೇಳೆ 50 ಮೀಟರ್ ದೂರದಲ್ಲಿದ್ದ ಗುಹೆಯ ಬಳಿ ಮತ್ತೊಂದು ಹೆಣ್ಣು ಹುಲಿ ಮರಿಯ ಕಳೇಬರವೂ ಪತ್ತೆಯಾಯಿತು.

ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ, ಸುಮಾರು 15 ದಿನಗಳ ವಯಸ್ಸಿನ ಈ ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟ ಬಳಿಕ ಆಹಾರ ಲಭ್ಯವಾಗದೆ ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ.

ಜೂನ್ 26ರಂದು ಇದೇ ವನ್ಯಜೀವಿ ವಿಭಾಗದ ಹೂಗ್ಯಂ ವಲಯದ ಮೀಣ್ಯಂ ಬಳಿ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ ಘಟನೆ ಇನ್ನೂ ಮರೆಯದ ಮುನ್ನ, ಇದೀಗ ಎರಡು ಹುಲಿ ಮರಿಗಳ ಸಾವಿನಿಂದ ವನ್ಯಜೀವಿ ಪ್ರೇಮಿಗಳು ಆಘಾತ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ದಿನಗಳಲ್ಲಿ ಹುಲಿಗಳ ಚಲನವಲನ ಹಾಗೂ ಅವರ ವಾಸಸ್ಥಾನಗಳ ಮೇಲೆ ಹೆಚ್ಚುವರಿ ನಿಗಾ ವಹಿಸಲು ಕ್ರಮ ಕೈಗೊಳ್ಳುತ್ತಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago