ಕ್ನೋ, ಜೂನ್ 23 – ಉತ್ತರ ಪ್ರದೇಶದ ಕ್ನೋ ಪ್ರದೇಶದಲ್ಲಿ ಪೊಲೀಸರ ನಿರ್ಲಕ್ಷ್ಯದಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಘಟನೆ ಜೂನ್ 12ರಂದು ನಡೆದಿದ್ದು, ಇದೀಗ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯ ಪ್ರಕಾರ, ಆರೋಪಿಗಳಿಬ್ಬರು ಬೈಕ್ ಮೇಲೆ ಕುಳಿತು ಮಾತನಾಡುತ್ತಿದ್ದುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದೇ ವೇಳೆ ಗಸ್ತು ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಲ್ಲಿಗೆ ಬರುತ್ತಾರೆ. ಆದರೆ, ಆರೋಪಿಗಳನ್ನು ನೋಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ಮೆರುತ್ತಾರೆ. ಅಷ್ಟರಲ್ಲಿ, ಓರ್ವ ಆರೋಪಿ ಸೂಟ್ಕೇಸ್ ಹಿಡಿದು ಪರಾರಿಯಾಗುತ್ತಾನೆ.
ಈ ದ್ರಶ್ಯ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹರಿದಾಡುತ್ತಿದ್ದಂತೆ ಉನ್ನತ ಪೊಲೀಸ್ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ವಾದನೆಗಳ ನಡುವೆಯೇ ಇಬ್ಬರು ಪೊಲೀಸರ ಸೇವೆಯನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಲಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…