ದಾಂಡೇಲಿ ನಗರದ ಬೈಯಲಪಾರಿನ ಐಪಿಎಮ್ ಗೇಟ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ.
ಬಂಧಿತರನ್ನು ಬೆಳಗಾವಿ ಜಿಲ್ಲೆಯ ಸೋಲಾಪುರ ನಿವಾಸಿ ವಾಸಿಮ್ ಇಸಾಕ್ ಮುಜಾವರ್ (27) ಮತ್ತು ದಾಂಡೇಲಿಯ ಸುಭಾಷ್ ನಗರದಲ್ಲಿ ವಾಸವಾಗಿರುವ ಶಾನವಾಜ್ ಇಮ್ತಿಯಾಜ್ ಶೇಖ್ (22) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳಿಂದ ಒಟ್ಟು 1 ಕೆ.ಜಿ 198 ಗ್ರಾಂ ತೂಕದ ಗಾಂಜಾ ಹಾಗೂ ಮಾರಾಟದಿಂದ ಪಡೆದ ನಗದು ₹550 ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯವನ್ನು ಸುಮಾರು ₹60,000 ಎಂದು ಅಂದಾಜಿಸಲಾಗಿದೆ.
ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ತನಿಖೆ ಮುಂದುವರಿಸಲಾಗಿದೆ.
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…