Latest

ಪವಿತ್ರಾ ಸಾವನ್ನು ಸಹಿಸಲಾಗದೆ ಚಂದ್ರಕಾಂತ್ ಆತ್ಮಹತ್ಯೆ

ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಅವರು ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೇ ಅಪಘಾತದಲ್ಲಿ ಪವಿತ್ರಾ ಬಾಯ್ ಫ್ರೆಂಡ್​, ನಟ ಚಂದ್ರಕಾಂತ್ ಗಾಯಗೊಂಡಿದ್ದರು. ಪವಿತ್ರಾ ಸಾವನ್ನು ಸಹಿಸಲಾಗದೆ ಚಂದ್ರಕಾಂತ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿ ಪವಿತ್ರಾ ಜಯರಾಮ್ ಕನ್ನಡ ಸೇರಿದಂತೆ ಬೇರೆ ಭಾಷೆಯ ಹಲವು ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. ಆದರೆ, ಚಂದ್ರಕಾಂತ್ ಕೂಡ ಮದುವೆಯಾಗಿದ್ದವರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆದರೆ, ಪವಿತ್ರಾ ಅವರ ಸ್ನೇಹವಾದ ನಂತರ ಕುಟುಂಬದಿಂದ ದೂರ ಉಳಿದಿದ್ದರು ಎಂದು ತಿಳಿದುಬಂದಿದೆ.
ಪವಿತ್ರಾ ಅಪಘಾತದಲ್ಲಿ ಸಾವನ್ನಪ್ಪಿದ್ದರಿಂದ ಚಂದ್ರಕಾಂತ್ ಖಿನ್ನತೆಗೆ ಒಳಗಾಗಿದ್ದರು. ಅವರಿಲ್ಲದ ಜಗತ್ತಿನಲ್ಲಿ ತಾನು ಇರಲು ಸಾಧ್ಯವಿಲ್ಲ ಎಂದೂ, ಆಕೆಯ ಬಗ್ಗೆ ಸರಣಿ ಪೋಸ್ಟ್‌ಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಕೂಡ ಮಾಡಿದ್ದರು. ಚಂದ್ರಕಾಂತ್ ಎರಡು ದಿನ ಕಾಯುವಂತೆ ಹೇಳಿ ಪೋಸ್ಟ್ ಮಾಡಿದ್ದರು ಆದರೆ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ನಾವು ಚಂದು ಮೊಬೈಲ್​ ಗೆ ಫೋನ್ ಮಾಡಿದ್ವಿ. ಆದ್ರೆ ಅವರು ಫೋನ್ ತೆಗೆದುಕೊಳ್ಳಲಿಲ್ಲ, ಬಳಿಕ ನಾವು ನಮಗೆ ತಿಳಿದಿರುವವರನ್ನು ಅವರ ಫ್ಲಾಟ್‌ ಗೆ ಕಳುಹಿಸಿದ್ದೆ. ಅಲ್ಲಿ ಬಾಗಿಲು ಒಡೆದು ನೋಡಿದಾಗ ಚಂದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂತು ಎಂದು ಚಂದ್ರಕಾಂತ್ ಪತ್ನಿ ಶಿಲ್ಪಾ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

9 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

15 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago