Crime

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಬಳಿ ಚಾಮರಾಜನಗರ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ 32 ಮೃತ ದುರ್ದೈವಿ.
ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು. ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಚಾಮರಾಜನಗರ ಕಡೆಗೆ ಅತಿ ವೇಗವಾಗಿ ಬಂದ ಕಾರಿನ ಚಾಲಕ ರಸ್ತೆಯ ಬದಿಯಲ್ಲಿ ನಿಂತಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರಿಗೂ ಸಹ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಮಂಜುಳಾ ತನ್ನ ಮಕ್ಕಳನ್ನು ಬಚಾವ್ ಮಾಡಿದ್ದಾಳೆ. ಕಾರಿನ ಚಕ್ರ ಹೊಟ್ಟೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮಂಜುಳಾ ಸಾವನ್ನಪ್ಪಿದ್ದಾಳೆ. ಲಕ್ಷ್ಮಣ, ಸಿಂಧು, ಶಿವ ಮಲ್ಲು, ನೇಹರ್, ರಾಜಪ್ಪ ಹಾಗೂ ಮೃತ ಮಹಿಳೆಯ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಅಪರಿಚಿತ ವಾಹನದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ನಂತರ ಕುಟುಂಬಸ್ಥರಿಗೆ ಒಪ್ಪಿಸಲಾಯಿತು.
ಮೃತ ಮಹಿಳೆಯು ಅಪಘಾತಕ್ಕೂ ಮುನ್ನ ಬ್ಯಾಂಕಿಗೆ ಖಾತೆ ತೆರೆಯಲು ಹೋಗಿದ್ದ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದ್ದು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕವಲಂದೆ ಗ್ರಾಮದ ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ ರಸ್ತೆಗೆ ಬ್ಯಾರಿ ಕೇಡ್ , ಸಿಗ್ನಲ್ ದೀಪ, ರಸ್ತೆ ಉಬ್ಬು ಮತ್ತು ನಾಮಫಲಕಗಳನ್ನು ಈ ಕೂಡಲೇ ಅಳವಡಿಸಿ ಅಪಘಾತಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago