ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಭೀಕರ ಘಟನೆ ನಡೆದಿದೆ. ಸುಮಾರು 40 ವರ್ಷ ವಯಸ್ಸಿನ ಅನಾಮಿಕ ಮಹಿಳೆಯ ಶವ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಹಿಳೆಯ ಮೇಲೆ ಮೊದಲಿಗೆ ಅತ್ಯಾಚಾರ ಎಸಗಿದ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆಯೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೆಟ್ರೋಲ್ ಬಳಕೆಯ ಸುಳಿವುಗಳು ದೊರೆತಿದ್ದು, ಈ ನಿಟ್ಟಿನಲ್ಲಿ ತನಿಖೆ ಆರಂಭಿಸಲಾಗಿದೆ.
ಘಟನಾ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ ಹಾಗೂ ಪಿಎಸ್‌ಐ ತಿರುಮಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ದಾರುಣ ಘಟನೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಗುರುತು ಪತ್ತೆಹಚ್ಚುವ ಮತ್ತು ಅಪರಾಧಿಗಳನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸ್ಥಳೀಯರಲ್ಲಿ ಆತಂಕ ಮೂಡಿಸಿರುವ ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…