ಮಂಗಳೂರು: ಮಾಟ ಮಂತ್ರ ಮಾಡಲಾಗಿದೆ ಎಂಬ ಭಯ ಮೂಡಿಸಿ, ಅದರಿಂದ ಪರಿಹಾರ ನೀಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಲ್ಲದೇ, ಲಕ್ಷ ರೂಪಾಯಿಗೂ ಹೆಚ್ಚು ಹಣ ವಂಚಿಸಿದ ಆರೋಪದ ಮೇಲೆ ಮಂಗಳೂರು ಮಹಿಳಾ ಠಾಣೆ ಪೊಲೀಸರು ಗುರುವಾಯನಕೆರೆಯ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಬಂಧಿಸಿದ್ದಾರೆ.
2022ರಲ್ಲಿ ಮನೋವೈಕಲ್ಯದಿಂದ ಬಳಲುತ್ತಿದ್ದ ಮಹಿಳೆ, ತಮ್ಮ ಅಕ್ಕನ ಗಂಡನ ಸಲಹೆಯಂತೆ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಬಳಿ ಹೋಗಿದ್ದರು. ಕರೀಮ್, “ನಿಮ್ಮ ಮೇಲೆ ಯಾರೋ ಮಾಟ ಮಂತ್ರ ಮಾಡಿದ್ದಾರೆ. ಅದನ್ನು ನಿವಾರಣೆ ಮಾಡಬೇಕು” ಎಂದು ಹೆದರಿಸಿ, ತನ್ನ ಬಳಿ ಚಿಕಿತ್ಸೆ ಪಡೆಯುವಂತೆ ಹೇಳಿದ್ದ.
ಮಾಹಿತಿಯಂತೆ, ಪರಿಹಾರದ ನೆಪದಲ್ಲಿ ಕರೀಮ್ ಆ ಮಹಿಳೆಯನ್ನು ಮರುಮರು ತನ್ನ ಮನೆಗೆ ಬರುವಂತೆ ಮಾಡಿದ. ಪ್ರಾರಂಭದಲ್ಲಿ ಕುರ್‌ಆನ್ ಓದುತ್ತಿದ್ದ ಅಬ್ದುಲ್, ಸಮಯಾವಕಾಶ ನೋಡಿಕೊಂಡು ಮಹಿಳೆಗೆ ದೈಹಿಕ ಕಿರುಕುಳ ನೀಡಿದ. 2022ರ ಫೆಬ್ರವರಿ 10ರಂದು ಮಹಿಳೆ ಒಬ್ಬಳೇ ಕರೀಮ್ ನ ಮನೆಗೆ ಹೋದ ಸಂದರ್ಭದಲ್ಲಿ, ಕರೀಮ್ ಕುರ್‌ಆನ್ ಓದಿ ಆಕೆಯ ಮೇಲೆ ಕೈ ಹಾಕಿ ಅವಾಚ್ಯವಾಗಿ ವರ್ತಿಸಿದ್ದಾನೆ.
ಇಲ್ಲದೆ, ಚಿಕಿತ್ಸೆಗಾಗಿ ಹಣ ಬೇಕೆಂದು ಹೇಳಿ, ಹಂತ ಹಂತವಾಗಿ ಆಕೆಯಿಂದ 1 ಲಕ್ಷಕ್ಕೂ ಹೆಚ್ಚು ರೂಪಾಯಿ ಪಡೆದುಕೊಂಡಿರುವುದಾಗಿ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದೇ ಶೈಲಿಯಲ್ಲಿ ಕರೀಮ್ ಹಲವಾರು ಮಂದಿಗೆ ಮಾಟ ಮಂತ್ರ ಪರಿಹಾರದ ನಂಬಿಕೆ ಮೂಡಿಸಿ ಹಣ ಪಡೆದು ಮೋಸಮಾಡಿರುವ ಬಗ್ಗೆವೂ ಮಾಹಿತಿ ಲಭಿಸಿವೆ. ಮೌಢ್ಯ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು, ಆತ ಹಲವರ ಭಾವನೆಗಳ ಜೊತೆ ಆಟವಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…