Latest

ವೆಂಕಟೇಶ್ವರ ನನ್ನ ಪತಿ, ನನ್ನ ಮೈ ಮೇಲೆ ದೇವರು ಬರುತ್ತೆ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ಗೃಹಿಣಿಯ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣಪ್ಪ ಎಂಬವರು ಅಡ್ಡಗಟ್ಟಿ ಹಲ್ಲೆ‌ ಮಾಡಿದ್ದಾರೆ ಎನ್ನಲಾದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದು ದೂರಿನಲ್ಲಿ ನೀನು ಸ್ನಾನ ಮಾಡದೆ ಶುದ್ಧಿ ಇಲ್ಲದೆ ದೇವಸ್ಥಾನಕ್ಕೆ ಬಂದಿದ್ದೀಯಾ ನಿನಗೆ ದೇವರ ದರ್ಶನ ಮಾಡಲು ಅನುಮತಿ ಇಲ್ಲ ಎಂದು ಹೊಡೆದು ನಿಂದಿಸಿದ್ದಾರೆ ಎಂದು ದೂರನ್ನು ದಾಖಲಿಸಿದ್ದು ಇದಕ್ಕೆ ದೇವಸ್ಥಾನದ ಧರ್ಮದರ್ಶಿ ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ ನನ್ನ ಪತಿ. ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರಬೇಕು ಎಂದು ಮಹಿಳೆ ಹಠಕ್ಕೆ ಬಿದ್ದಿದ್ದಾಳೆ. ಈ ವೇಳೆ ಅರ್ಚಕ ರಾಜಾಜಂ, ಮಹಿಳೆಗೆ ತಿಳಿ ಹೇಳಿದರು. ಆದರೂ ಕೇಳದೇ ಗರ್ಭಗುಡಿಯ ಒಳಗೆ ಹೋಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಅವರನ್ನು ಅವಾಚ್ಯವಾಗಿ ನಿಂದಿಸಿ ಮುಖಕ್ಕೆ ಉಗಿದಿದ್ದಳು ಎಂದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮದರ್ಶಿ ಮಹಿಳೆಯ ವಿರುದ್ಧ ಪ್ರತಿ ದೂರನ್ನು ದಾಖಲಿಸಿರುತ್ತಾರೆ. ದೇವಸ್ಥಾನಕ್ಕೆ ಬಂದು ಮಹಿಳೆಯನ್ನು ಹೇಮಾವತಿ ಎಂದು ಗುರುತಿಸಲಾಗಿದೆ.  ಸದ್ಯ ಆರೋಪಿ ಮುನಿಕೃಷ್ಣರನ್ನು ಪೊಲೀಸರು ಬಂಧಿಸಿದ್ದಾರೆ.

ಹೆಚ್ಚಿನ ಅಪ್ಡೇಟ್ಸ್ ಗಳಿಗಾಗಿ ಭ್ರಷ್ಟರ ಬೇಟೆ ಗ್ರೂಪನ್ನು ಸೇರ್ಪಡೆಗೊಳ್ಳಿ 👇
https://chat.whatsapp.com/GxPK1CS1zBeHuQMDPO7SYU

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago