Latest

ಕೊಟ್ಟ ಸಾಲ ವಾಪಸ್ ನೀಡದಿದ್ದಕ್ಕೆ ಪಶುವೈದ್ಯ ಆತ್ಮಹತ್ಯೆ!

ಕೊಟ್ಟ ಸಾಲವನ್ನು ಸ್ನೇಹಿತರು ವಾಪಸ್ ಹಿಂದಿರುಗಿಸಿಲ್ಲ ಎಂದು ಮನನೊಂದು ಪಶುವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.
ನಂದೆಪ್ಪ ಬಾಗೇವಾಡಿ ಮೃತ ಪಶುವೈದ್ಯ. ಬನಹಟ್ಟಿ ತಾಲೂಕಿನ ಹಿಪ್ಪರಗಿ ನಿವಾಸಿಯಾಗಿರುವ ನಂದೆಪ್ಪ ಅವರು ತನ್ನ ಓರ್ವ ಸಹೋದ್ಯೋಗಿ ಪಶುವೈದ್ಯನಿಗೆ 5 ಲಕ್ಷ ರೂಪಾಯಿ ಹಾಗೂ ಮತ್ತೊಬ್ಬ ಗೆಳೆಯನಿಗೆ 7 ಲಕ್ಷ ರೂಪಾಯಿ ಸಾಲು ನೀಡಿದ್ದರು. ಆದರೆ ಸಾಲ ಹಿಂದಿರುಗಿಸದ ಹಿನ್ನಲೆ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿದ್ದು, ಇದರಲ್ಲಿ ಸಾಲ ನೀಡಿದ್ದರ ಬಗ್ಗೆ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago