ಕೊಟ್ಟ ಸಾಲವನ್ನು ಸ್ನೇಹಿತರು ವಾಪಸ್ ಹಿಂದಿರುಗಿಸಿಲ್ಲ ಎಂದು ಮನನೊಂದು ಪಶುವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.
ನಂದೆಪ್ಪ ಬಾಗೇವಾಡಿ ಮೃತ ಪಶುವೈದ್ಯ. ಬನಹಟ್ಟಿ ತಾಲೂಕಿನ ಹಿಪ್ಪರಗಿ ನಿವಾಸಿಯಾಗಿರುವ ನಂದೆಪ್ಪ ಅವರು ತನ್ನ ಓರ್ವ ಸಹೋದ್ಯೋಗಿ ಪಶುವೈದ್ಯನಿಗೆ 5 ಲಕ್ಷ ರೂಪಾಯಿ ಹಾಗೂ ಮತ್ತೊಬ್ಬ ಗೆಳೆಯನಿಗೆ 7 ಲಕ್ಷ ರೂಪಾಯಿ ಸಾಲು ನೀಡಿದ್ದರು. ಆದರೆ ಸಾಲ ಹಿಂದಿರುಗಿಸದ ಹಿನ್ನಲೆ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಇದರಲ್ಲಿ ಸಾಲ ನೀಡಿದ್ದರ ಬಗ್ಗೆ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…