Latest

ವಯಾಡೆಕ್ಟ್ ಉರುಳಿ ಜೀವ ಹರಣ: ಮೆಟ್ರೋ ಕಾಮಗಾರಿಯಲ್ಲಿ ನಿರ್ಲಕ್ಷ್ಯ ಆರೋಪ, ಮೂವರ ವಿರುದ್ಧ ಎಫ್‌ಐಆರ್

ಬೆಂಗಳೂರು: ನಗರದ ಏರ್‌ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ಭೀಕರ ದುರ್ಘಟನೆಗೆ ಸಂಬಂಧಿಸಿ ಮೂರು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವನ್ನಪ್ಪಿದ್ದ ಘಟನೆ ಈಗ ಗಂಭೀರ ತಿರುವು ಪಡೆದುಕೊಂಡಿದೆ.

ಮೃತ ಖಾಸಿಂ ಸಾಬ್ (35) ಅವರ ಮಾವ ಸೈಯ್ಯದ್ ಖಾದರ್ ನೀಡಿದ ದೂರಿನ ಆಧಾರದಲ್ಲಿ, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯನ್ನು ಚಾಲನೆ ಮಾಡುತ್ತಿದ್ದ ಚಾಲಕ, ಕಾಮಗಾರಿ ಜವಾಬ್ದಾರಿ ಹೊಂದಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 281 (ಅಪಾಯಕಾರಿಯಾಗಿ ವಾಹನ ಚಲಾಯಿಸುವುದು) ಮತ್ತು 106 (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಮಂಗಳವಾರ ತಡರಾತ್ರಿ, ಲಾರಿಯಲ್ಲಿ ವಯಾಡೆಕ್ಟ್‌ನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಲಾರಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಸಮತೋಲನ ತಪ್ಪಿದ ವಯಾಡೆಕ್ಟ್ ನಿಯಂತ್ರಣ ತಪ್ಪಿ ಅತ್ತ ಜಾರಿದ ಆಟೋ ಮೇಲೆ ಬಿದ್ದಿತು. ಪರಿಣಾಮ ಆಟೋದಲ್ಲಿದ್ದ ಖಾಸಿಂ ಸಾಬ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟರು.

ದುರ್ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾದನು. ಈ ಘಟನೆ ತೀವ್ರ ಆಕ್ರೋಶವನ್ನುಂಟುಮಾಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago