ಬೆಂಗಳೂರು: ನಗರದ ಏರ್‌ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ಭೀಕರ ದುರ್ಘಟನೆಗೆ ಸಂಬಂಧಿಸಿ ಮೂರು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಯಾಡೆಕ್ಟ್ ಉರುಳಿ ಆಟೋ ಚಾಲಕ ಸಾವನ್ನಪ್ಪಿದ್ದ ಘಟನೆ ಈಗ ಗಂಭೀರ ತಿರುವು ಪಡೆದುಕೊಂಡಿದೆ.
ಮೃತ ಖಾಸಿಂ ಸಾಬ್ (35) ಅವರ ಮಾವ ಸೈಯ್ಯದ್ ಖಾದರ್ ನೀಡಿದ ದೂರಿನ ಆಧಾರದಲ್ಲಿ, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಯನ್ನು ಚಾಲನೆ ಮಾಡುತ್ತಿದ್ದ ಚಾಲಕ, ಕಾಮಗಾರಿ ಜವಾಬ್ದಾರಿ ಹೊಂದಿದ್ದ ಕಂಪನಿಯ ಮ್ಯಾನೇಜರ್ ಹಾಗೂ ಗುತ್ತಿಗೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 281 (ಅಪಾಯಕಾರಿಯಾಗಿ ವಾಹನ ಚಲಾಯಿಸುವುದು) ಮತ್ತು 106 (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಮಂಗಳವಾರ ತಡರಾತ್ರಿ, ಲಾರಿಯಲ್ಲಿ ವಯಾಡೆಕ್ಟ್‌ನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಲಾರಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಸಮತೋಲನ ತಪ್ಪಿದ ವಯಾಡೆಕ್ಟ್ ನಿಯಂತ್ರಣ ತಪ್ಪಿ ಅತ್ತ ಜಾರಿದ ಆಟೋ ಮೇಲೆ ಬಿದ್ದಿತು. ಪರಿಣಾಮ ಆಟೋದಲ್ಲಿದ್ದ ಖಾಸಿಂ ಸಾಬ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟರು.
ದುರ್ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾದನು. ಈ ಘಟನೆ ತೀವ್ರ ಆಕ್ರೋಶವನ್ನುಂಟುಮಾಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…