Latest

ಸಿಎಂ ವಿರುದ್ಧ ವಿಡಿಯೋ: ಮೈಸೂರು ಕಾರಾಗೃಹ ಕಾನ್‌ಸ್ಟೇಬಲ್ ಅಮಾನತು

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಎಚ್.ಎನ್. ಮಧುಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ವಾಗಿ ವಿಡಿಯೋ ಹಂಚಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ್ ಅವರು ಈ ಸಂಬಂಧ ಅಮಾನತು ಆದೇಶ ಹೊರಡಿಸಿದ್ದಾರೆ. ಮಧುಕುಮಾರ್ ಅವರು ತಮ್ಮ ವಿಡಿಯೋದಲ್ಲಿ ಮುಖ್ಯಮಂತ್ರಿಯನ್ನು ಏಕವಚನದಲ್ಲಿ ಟೀಕಿಸಿದ ಕುರಿತು ವರದಿಯಾಗಿದೆ.

ಏಪ್ರಿಲ್ 28 ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಎಸ್ಪಿ ವಿರುದ್ಧ ಕಿಡಿಕಾರಿದ ಘಟನೆ ಕುರಿತಂತೆ ಮಧುಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಧಿಕಾರವಾಹಕರ ಗಮನ ಸೆಳೆದಿದೆ.

ಸರ್ಕಾರಿ ನೌಕರನೊಬ್ಬನಿಂದಾದ ವರ್ತನೆ ಸರಿಯಾದದಲ್ಲವೆಂದು ಪರಿಗಣಿಸಿ, ಹಿರಿಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಮುಂದಿನ ತನಿಖೆ ಫಲಿತಾಂಶದಂತೆ ಮುಂದಿನ ಕ್ರಮ ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

4 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago