ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರೈತ ಪುನೀತ್ ಕಡಿವಾಳ್ 28 ಗುಂಟೆ ಜಮೀನಿನ ಕ್ರಯ ಮಾಡಿಸಿಕೊಳ್ಳಲು 10,000 ಬೇಡಿಕೆ ಬೇಡಿಕೆ ಇಟ್ಟಿದ್ದರು, 8000 ರೂಪಾಯಿಗಳನ್ನು ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿಸಿಕೊಳ್ಳುವ ವೇಳೆ ಗೌರಿಬಿದನೂರು ನಗರದ ಮಾದನಹಳ್ಳಿಯಲ್ಲಿರುವ ಅವರ ಮನೆಯಲ್ಲಿಯೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಈ ಕಾರ್ಯಾಚರಣೆ ಲೋಕಾಯುಕ್ತ ಎಸ್ ಪಿ ಅಂಟೋನಿ ಜಾನ್ ನೇತೃತ್ವದಲ್ಲಿ ಡಿ ವೈ ಎಸ್ ಪಿ ವೀರೇಂದ್ರ ಕುಮಾರ್ ನೇತೃತ್ವದಲ್ಲಿ ನಡೆದಿದೆ, ಸಿಬ್ಬಂದಿ ಗುರು ಮತ್ತಿತರರು ಪಾಲ್ಗೊಂಡಿದ್ದರು.

ವರದಿ: ಅವಿನಾಶ್

Related News

error: Content is protected !!