ಮನೆಯ ಮ್ಯೂಟೇಷನ್ ಪ್ರಕ್ರಿಯೆ ನಡೆಸಿಕೊಡುವ ಹೆಸರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ.
ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಅವರು ತಮ್ಮ ಮನೆಯ ಮ್ಯೂಟೇಷನ್ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಸಂಪರ್ಕಿಸಿದ್ದರು. ಈ ವೇಳೆ ಶಿವಕುಮಾರ್ ಹಾಗೂ ಅವರ ಸಹಚರ ಶರಣಯ್ಯ ಸ್ವಾಮಿ ಇಬ್ಬರೂ ಸೇರಿ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಲಂಚ ನೀಡಲು ಇಚ್ಛಿಸದ ಮಹಾದೇವ ಅವರು ಈ ಬಗ್ಗೆ ಬೀದರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ದೂರು ಆಧರಿಸಿ ಅಧಿಕಾರಿಗಳು ಉಚಿತವಾಗಿ ಬಲೆ ಬೀಸಿದ್ದು, ಮಂಗಳವಾರ ಲಂಚದ ಮೊತ್ತದ ಮೊದಲ ಹಂತವಾಗಿ ₹2.5 ಲಕ್ಷ ಹಣವನ್ನು ಸ್ವೀಕರಿಸುವ ಸಮಯದಲ್ಲಿ ದಾಳಿ ನಡೆಸಿದರು.
ಮರಕುಂದಾ ಗ್ರಾಮದ ಹೊರವಲಯದಲ್ಲಿರುವ ದಾಬಾದಲ್ಲಿ ಮಹಾದೇವರಿಂದ ₹2.5 ಲಕ್ಷ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಶಿವಕುಮಾರ್ ಹಾಗೂ ಶರಣಯ್ಯ ಸ್ವಾಮಿ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣವು ಸ್ಥಳೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…