Categories: Latest

10 ದಿನಗಳಿಂದ ನೀರಿಲ್ಲದೆ ಪರದಾಟ: ಮುಂಡಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಗ್ರಾಮಸ್ಥರ ಮುತ್ತಿಗೆ

ಭಟ್ಕಳ: ಕುಡಿಯುವ ನೀರಿನ ತೀವ್ರ ಸಮಸ್ಯೆಯಿಂದ ಬೇಸತ್ತ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ಕೋಟಿ ಖಜಾನೆ ಮನೆ ಪ್ರದೇಶದ ನಿವಾಸಿಗಳು ಶನಿವಾರ ಮುಂಡಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಳೆದ 10 ದಿನಗಳಿಂದ ಈ ಭಾಗಕ್ಕೆ ಕುಡಿಯುವ ನೀರು ಪೂರೈಸುವ ಮುಖ್ಯ ಪೈಪ್‌ಲೈನ್ ಒಡೆದಿರುವ ಕಾರಣ ಗ್ರಾಮಸ್ಥರು ನೀರಿಗಾಗಿ ಪರದಾಡುವಂತಾಗಿತ್ತು. ಸಮಸ್ಯೆ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಬೆಳಿಗ್ಗೆ ಪಂಚಾಯಿತಿ ಕಚೇರಿಗೆ ಆಗಮಿಸಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರನ್ನು ತರಾಟೆಗೆ ತೆಗೆದುಕೊಂಡು, ತಕ್ಷಣವೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.

ಈ ವೇಳೆ ಮುಂಡಳ್ಳಿ ಗ್ರಾಮ ಪಂಚಾಯಿತಿಯ ನಿಕಟಪೂರ್ವ ಸದಸ್ಯ ರಾಜು ನಾಯ್ಕ್ ಅವರು ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯ ಕುರಿತು ಚರ್ಚಿಸಿದರು. ಬಳಿಕ ತುರ್ತು ಕ್ರಮವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಲಾಯಿತು.

ಟ್ಯಾಂಕರ್ ಮೂಲಕ ಸದ್ಯಕ್ಕೆ ತಾತ್ಕಾಲಿಕ ಪರಿಹಾರ ದೊರೆತಿದ್ದರೂ, ಒಡೆದಿರುವ ಪೈಪ್‌ಲೈನ್ ಅನ್ನು ಶೀಘ್ರ ದುರಸ್ತಿ ಮಾಡಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

13 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago