Latest

ಬಾಲ್ಯವಿವಾಹ ವಿರೋಧಿಸಿದ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..!

ಚಿಕ್ಕಮಗಳೂರು: ಕಡೂರು ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯೊಬ್ಬರು ಬಾಲ್ಯ ವಿವಾಹದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪರಿಣಾಮ, ಗ್ರಾಮಸ್ಥರು ಶಿಕ್ಷಕಿಯ ಕುಟುಂಬದ ವಿರುದ್ಧ ಸಾಮಾಜಿಕ ಬಹಿಷ್ಕಾರ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ತೇಜಸ್ವಿನಿ ಎಂಬ ಶಿಕ್ಷಕಿ, ಇತ್ತೀಚೆಗೆ ಗ್ರಾಮದಲ್ಲಿ ನಡೆಯಬೇಕಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹದ ಮಾಹಿತಿ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. ಇದರ ಪರಿಣಾಮವಾಗಿ ವಿವಾಹ ರದ್ದುಪಡಿಸಲಾಯಿತು ಹಾಗೂ ಬಾಲ್ಯ ವಿವಾಹಕ್ಕೆ ಕಾರಣರಾಗಿದ್ದ ಪೋಷಕರು ಮತ್ತು ವರನ ವಿರುದ್ಧ ಕಾನೂನು ಕ್ರಮವೂ ಜರುಗಿತು.

ಈ ಘಟನೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕಿ ಹಾಗೂ ಅವರ ಕುಟುಂಬದ ವಿರುದ್ಧ ಗ್ರಾಮಸ್ಥರು ಪಂಚಾಯತ್ ನಡೆಸಿ ದಂಡ ವಿಧಿಸಿದ್ದಾರೆ. ಅಲ್ಲದೆ, ಇವರಿಗೆ ಗ್ರಾಮದಲ್ಲಿನ ದೇವಾಲಯ ಪ್ರವೇಶ, ಸಾರ್ವಜನಿಕವಾಗಿ ಮಾತನಾಡುವುದು ಸೇರಿದಂತೆ ಎಲ್ಲರ ಜೊತೆಗೆ ಸಂಪರ್ಕಕ್ಕೆ ನಿರ್ಬಂಧ ವಿಧಿಸಿದ್ದಾರೆ.

ತೇಜಸ್ವಿನಿಯು ತಮ್ಮ ಹುದ್ದೆಯಿಂದ ಕೆಳಹರಡುಬೇಕು, ಇನ್ನು ಮುಂದೆ ಗ್ರಾಮದಲ್ಲಿ ಕೆಲಸ ಮಾಡುವಂತಿಲ್ಲ ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಜೊತೆಗೆ, ಅವರ ಕುಟುಂಬದವರೊಂದಿಗೆ ಯಾರಾದರೂ ಮಾತನಾಡಿದರೆ ಅವರಿಗೂ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಹೊರಡಿಸಿರುವುದು ಕೂಡ ತಿಳಿದು ಬಂದಿದೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

56 minutes ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

2 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

2 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

2 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

22 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago