Latest

ನಿರ್ಲಕ್ಷ್ಯದ ಆರೋಪ: ವಿನೋಬನಗರ ಠಾಣೆಯ ಇನ್‌ಸ್ಪೆಕ್ಟರ್ ಚಂದ್ರಕಲಾ ಅಮಾನತು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ, ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.‌

ಈ ಕ್ರಮಕ್ಕೆ ಕಾರಣವಾದದ್ದು, ಇತ್ತೀಚೆಗೆ ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ವಿನೋಬನಗರ ಠಾಣೆಗೆ ಅಚಾನಕ್ ಭೇಟಿ ನೀಡಿದ ಸಂದರ್ಭದಲ್ಲಿ, ಇನ್‌ಸ್ಪೆಕ್ಟರ್ ಚಂದ್ರಕಲಾ ಅವರು ಅಪೇಕ್ಷಿತ ರೀತಿಯಲ್ಲಿ ಸ್ಪಂದಿಸದಿರುವುದು ಹಾಗೂ ಇಲಾಖೆಯ ಕರ್ತವ್ಯ ಪಾಲನೆಗೆ ನಿರ್ಲಕ್ಷ್ಯ ವಹಿಸಿದ್ದಾರನ್ನುವೇ ಆಗಿದೆ.

ವಿಭಾಗದ ತನಿಖೆಯಲ್ಲಿ‌ ಚಂದ್ರಕಲಾ ಅವರು ದಾಖಲೆ ನಿರ್ವಹಣೆಯಲ್ಲಿ ಲೋಪವಿರುವುದು, ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ಕಾಪಾಡದೇ ಇದ್ದುದು ಬೆಳಕಿಗೆ ಬಂದಿದೆ. ಹಿರಿಯರು ಠಾಣೆಗೆ ಬಂದಾಗ ಸ್ಥಳದಲ್ಲಿಯೇ ಸರಿಯಾದ ಮಾಹಿತಿ ನೀಡದೇ, ತಮ್ಮ ಕರ್ತವ್ಯದತ್ತ ನಿರಾಸಕ್ತಿಯನ್ನು ತೋರಿದ್ದಾರೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ, ಇನ್‌ಸ್ಪೆಕ್ಟರ್ ಚಂದ್ರಕಲಾ ಅವರನ್ನು ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಅಮಾನತು ಮಾಡುವುದಾಗಿ ಎಸ್‌ಪಿ ಮಿಥುನ್ ಕುಮಾರ್ ಆದೇಶಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯಲಿದೆ.

ಕಾನೂನು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ನಂಬಿಕೆಯನ್ನು ಉಳಿಸಿ ಕಾಪಾಡಲು ಈ ಕ್ರಮ ಅಗತ್ಯವಾಯಿತೆಂಬ ಅಭಿಪ್ರಾಯವನ್ನು ಪೊಲೀಸ್ ಇಲಾಖೆ ಹೊರಹಾಕಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago