Categories: CrimeLatest

ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣ: ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು..!

ಮೂಡಬಿದಿರೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಈ ಕ್ರಮ ಕೈಗೊಂಡಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಆಡಿಯೋ-ವಿಡಿಯೋ ಕ್ಲಿಪ್‌ಗಳು ವಿವಾದಕ್ಕೆ ಕಾರಣವಾಗಿದ್ದು, ಅವುಗಳ ನೈಜತೆ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ಆರೋಪಗಳ ಗಂಭೀರತೆಯನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಅಮಾನತು ವಿಧಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ಸಮಗ್ರ ತನಿಖೆ ನಡೆಯಲಿದೆ. ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಇದಲ್ಲದೆ, ಅಧಿಕಾರ ದುರುಪಯೋಗ, ಹಣದ ಬೇಡಿಕೆ ಮತ್ತು ಅಪ್ರಾಪ್ತೆಯ ಸುರಕ್ಷತೆ ಕುರಿತು ಕೆಲ ಗಂಭೀರ ಆರೋಪಗಳೂ ಪರಿಶೀಲನೆಯಲ್ಲಿ ಪ್ರಕರಣದ ತೀವ್ರತೆಯನ್ನು ಗಮನಿಸಿ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಆಯೋಗವೂ ತನಿಖೆಗೆ ಪ್ರವೇಶಿಸಿದ್ದು, ವೈರಲ್ ಆಡಿಯೋಗೆ ವಿಧಿವಿಜ್ಞಾನ ಪರೀಕ್ಷೆ ನಡೆಸಲು ಸೂಚಿಸಿದೆ.

ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಪಾರದರ್ಶಕ ತನಿಖೆಗೆ ಆಗ್ರಹ ವ್ಯಕ್ತವಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

7 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

14 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago