Latest

ಪ್ರತಿಷ್ಠಿತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಬಂಧನ

ಬೆಂಗಳೂರು: ಪ್ರತಿಷ್ಠಿತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅವರನ್ನು ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಹೋಟೆಲ್ ಎದುರು ಗಲಾಟೆ – ಪುನಾವೃತವಾದ ಘಟನೆ

ಫೆಬ್ರವರಿ 7ರಂದು, ಬೆಂಗಳೂರಿನ ಒಂದು ಹೋಟೆಲ್ ಬಳಿ ವಿಷ್ಣು ಭಟ್ ಗಲಾಟೆ ಮಾಡಿದ್ದರೆಂದು ಮಾಹಿತಿ ದೊರಕಿದೆ. ಈ ಘಟನೆ ಮರೆತು ಹೋಗುವಷ್ಟರಲ್ಲಿಯೇ, ಫೆಬ್ರವರಿ 26ರಂದು ಅವರು ಮತ್ತೆ ಅದೇ ಹೋಟೆಲ್ ಗೆ ತೆರಳಿ, ವಿನಾಕಾರಣ ಜಗಳ ಆರಂಭಿಸಿದರು. ಈ ವೇಳೆ ಕಬ್ಬಿಣದ ವಸ್ತುವಿನಿಂದ ಹೋಟೆಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾನೂನು ಕ್ರಮ

ಹಲ್ಲೆಗೊಳಗಾದ ಹೋಟೆಲ್ ಸಿಬ್ಬಂದಿ, ತಕ್ಷಣವೇ ಹೆಚ್‌ಎಸ್‌ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಷ್ಣು ಭಟ್ ಅವರನ್ನು ಬಂಧಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

8 minutes ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

4 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

7 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

12 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago