ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ, ಜನಪ್ರಿಯ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನ ಕೆಂಗೇರಿ ಸಮೀಪದ ಅಭಿಮಾನ್ ಸ್ಟುಡಿಯೋದಲ್ಲಿ ರಾತ್ರೋರಾತ್ರಿ ನೆಲಸಮ ಮಾಡಿರುವ ಘಟನೆ ಅಭಿಮಾನಿಗಳ ಮನಸ್ಸಿಗೆ ಭಾರೀ ಆಘಾತ ಉಂಟುಮಾಡಿದೆ.
ಸಿನಿಪ್ರೇಮಿಗಳ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಈ ಸ್ಥಳವು ಹಿರಿಯ ನಟ ದಿ. ಬಾಲಕೃಷ್ಣ ಅವರ ಕುಟುಂಬದ ಸ್ವತ್ತಿನಲ್ಲಿತ್ತು. ಸರ್ಕಾರವು ಸ್ಮಾರಕ ನಿರ್ಮಾಣಕ್ಕಾಗಿ ಒಂದು ಎಕರೆ ಭೂಮಿಯನ್ನು ಪಡೆದಿದ್ದರೂ, ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಬಾಲಕೃಷ್ಣ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನ್ಯಾಯಾಲಯದ ಆದೇಶದಂತೆ ಈ ತೆರವು ಕಾರ್ಯ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿದ ತಕ್ಷಣ, ನಿರ್ದೇಶಕ ರವಿ ಶ್ರೀವತ್ಸ ಸ್ಥಳಕ್ಕೆ ಧಾವಿಸಿ ಭಾವುಕರಾದರು. ಸಮಾಧಿ ತೆರವುಗೊಂಡ ದೃಶ್ಯ ಕಣ್ಣಾರೆ ಕಂಡ ಅವರು ಕಣ್ಣೀರು ಹಾಕಿದ್ದು, ಬಳಿಕ ಫೇಸ್‌ಬುಕ್ ಲೈವ್ ಮೂಲಕ ತಮ್ಮ ನೋವನ್ನು ಹಂಚಿಕೊಂಡರು. “ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನಡೆದ ಈ ಸ್ಥಳಕ್ಕೆ ಅಭಿಮಾನಿಗಳಿಗೆ ಅನನ್ಯ ಭಾವನಾತ್ಮಕ ನಂಟಿತ್ತು. ಈಗ ಅದು ಸಂಪೂರ್ಣವಾಗಿ ಅಳಿದುಹೋಗಿರುವುದು ನೋವು ತಂದಿದೆ,” ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಈಗಾಗಲೇ ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಗೊಂಡಿದ್ದರೂ, ಅಭಿಮಾನ್ ಸ್ಟುಡಿಯೋದಲ್ಲಿ ಅವರ ದೇಹಕ್ಕೆ ಅಂತಿಮ ವಿಧಿ ನಡೆದಿದ್ದರಿಂದ ಅಭಿಮಾನಿಗಳಿಗೆ ಈ ಸ್ಥಳದ ಪ್ರೀತಿ ಬೇರೆಮಟ್ಟದಲ್ಲಿತ್ತು. ಆದರೆ, ವರ್ಷಗಳಿಂದ ನಡೆದುಬಂದಿದ್ದ ಜಮೀನು ವಿವಾದ ಮತ್ತು ನ್ಯಾಯಾಲಯದ ಆದೇಶದಿಂದ ಸ್ಮಾರಕ ತೆರವುಗೊಳ್ಳುವುದನ್ನು ಅಭಿಮಾನಿಗಳು ಮನಸ್ಸಾರೆ ಒಪ್ಪಿಕೊಳ್ಳಲಾಗುತ್ತಿಲ್ಲ.
ಕಾನೂನಾತ್ಮಕ ಕಾರಣದಿಂದ ತೆರವು ನಡೆದಿದ್ದರೂ, ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮಹತ್ವದ ನೆನಪುಗಳನ್ನು ಹೊತ್ತಿದ್ದ ಈ ಸ್ಥಳದ ಅಳಿವು, ವಿಷ್ಣುವರ್ಧನ್ ಅಭಿಮಾನಿಗಳ ಹೃದಯದಲ್ಲಿ ಅಳಿಸಲಾಗದ ಗಾಯವಾಗಿ ಉಳಿಯಲಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…