ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ನಂತರ ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಿಟ್ಲ ಠಾಣೆಯ ಉಪನಿರೀಕ್ಷಕ (ಎಸ್‌ಐ) ಕೌಶಿಕ್ ಬಿ.ಸಿ. ಅವರನ್ನು ಅಮಾನತು ಮಾಡಲಾಗಿದೆ.
ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಗಾರಿ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಮೇರೆಗೆ ಎಸ್‌ಐ ಕೌಶಿಕ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಜುಗಾರಿ ಆಟದಲ್ಲಿ ತೊಡಗಿದ್ದ ಹಲವರು ಸ್ಥಳದಲ್ಲೇ ಪತ್ತೆಯಾಗಿದ್ದು, ಜೊತೆಗೆ ಒಂದು ಮೋಟಾರ್‌ಸೈಕಲ್ ಸಹ ವಶಕ್ಕೆ ಸಿಕ್ಕಿತ್ತು.
ಆದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾದಾಗ ಎಸ್‌ಐ ಕೌಶಿಕ್ ಅವರು ಆರೋಪಿಗಳನ್ನು ಬಂಧಿಸುವ ಬದಲು, ಬೈಕ್ ಮಾಲಿಕನಿಗೆ ಕರೆಮಾಡಿ ಠಾಣೆಗೆ ಬರಮಾಡಿದ್ದರು. ಬಳಿಕ ಮೂರನೇ ವ್ಯಕ್ತಿಯ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಘಟನೆ ಹಿನ್ನೆಲೆಯಲ್ಲಿ, ಮೇ 12ರಂದು ಇಲಾಖಾತ್ಮಕ ಶಿಸ್ತು ಕ್ರಮದಡಿಯಲ್ಲಿ ಎಸ್‌ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಆರೋಪದಿಂದ ಪೊಲೀಸ್ ಇಲಾಖೆಯ ಇಮೇಜ್ ಮಸಿ ಹೊಡೆಯುತ್ತಿರುವುದರಿಂದ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…