ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ನಂತರ ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಿಟ್ಲ ಠಾಣೆಯ ಉಪನಿರೀಕ್ಷಕ (ಎಸ್‌ಐ) ಕೌಶಿಕ್ ಬಿ.ಸಿ. ಅವರನ್ನು ಅಮಾನತು ಮಾಡಲಾಗಿದೆ.
ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಗಾರಿ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಮೇರೆಗೆ ಎಸ್‌ಐ ಕೌಶಿಕ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಜುಗಾರಿ ಆಟದಲ್ಲಿ ತೊಡಗಿದ್ದ ಹಲವರು ಸ್ಥಳದಲ್ಲೇ ಪತ್ತೆಯಾಗಿದ್ದು, ಜೊತೆಗೆ ಒಂದು ಮೋಟಾರ್‌ಸೈಕಲ್ ಸಹ ವಶಕ್ಕೆ ಸಿಕ್ಕಿತ್ತು.
ಆದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾದಾಗ ಎಸ್‌ಐ ಕೌಶಿಕ್ ಅವರು ಆರೋಪಿಗಳನ್ನು ಬಂಧಿಸುವ ಬದಲು, ಬೈಕ್ ಮಾಲಿಕನಿಗೆ ಕರೆಮಾಡಿ ಠಾಣೆಗೆ ಬರಮಾಡಿದ್ದರು. ಬಳಿಕ ಮೂರನೇ ವ್ಯಕ್ತಿಯ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಘಟನೆ ಹಿನ್ನೆಲೆಯಲ್ಲಿ, ಮೇ 12ರಂದು ಇಲಾಖಾತ್ಮಕ ಶಿಸ್ತು ಕ್ರಮದಡಿಯಲ್ಲಿ ಎಸ್‌ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಆರೋಪದಿಂದ ಪೊಲೀಸ್ ಇಲಾಖೆಯ ಇಮೇಜ್ ಮಸಿ ಹೊಡೆಯುತ್ತಿರುವುದರಿಂದ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…