ನವದೆಹಲಿ: ಚುನಾವಣಾ ಆಯೋಗದ ವಿರುದ್ಧ “ಮತಗಳ್ಳತನ” ಆರೋಪ ಹೊರಿಸಿ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಗದ್ದಲ ಸೃಷ್ಟಿಯಾಯಿತು. ಈ ಮೆರವಣಿಗೆಯ ನೇತೃತ್ವ ವಹಿಸಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಡಿಎಂಕೆ ಸಂಸದೆ ಕನಿಮೊಳಿ ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಭಾಗವಹಿಸಿದ್ದರು.

ಮತ ಕಳ್ಳತನದ ಆರೋಪದ ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯತ್ತ ತೆರಳಿದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಮಧ್ಯೆ ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಯಿತು. ತಡೆಯೊಡ್ಡಿದರೂ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಮೆರವಣಿಗೆಯನ್ನು ಮುಂದುವರಿಸಲು ಪ್ರಯತ್ನಿಸಿದ ಪರಿಣಾಮ, ಪೊಲೀಸರು ಅವರನ್ನು ಬಂಧಿಸಿದರು.

ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ವಿರೋಧ ಪಕ್ಷದ ನಾಯಕರು, “ಜನರ ಮತ ಹಕ್ಕಿಗೆ ಧಕ್ಕೆಯಾಗಿದೆ” ಎಂದು ಆರೋಪಿಸಿ, ಚುನಾವಣೆ ಪ್ರಕ್ರಿಯೆಯ ಪಾರದರ್ಶಕತೆಗೆ ಒತ್ತಾಯ ವ್ಯಕ್ತಪಡಿಸಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

error: Content is protected !!