ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಬಿಬಿಎಂಪಿ ವ್ಯಾಪ್ತಿಯ ಮೂವರು ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್, ‘ಮತದಾರರ ಮಾಹಿತಿ ಕಳವು ಆರೋಪ ಪ್ರಕರಣ ಸಂಬಂಧ ನಾವು ತನಿಖೆ ನಡೆಸಿದ ವರದಿ ಕೈಸೇರಿದ್ದು, ಇದರನ್ವಯ ಕರ್ತವ್ಯ ಲೋಕವೆಸಗಿರುವ ಆರೋಪದಡಿ ಇಲ್ಲಿನ ಚಿಕ್ಕಪೇಟೆ ಆರ್ ಒ ಭೀಮಶಂಕರ್, ಮಹಾದೇವಪುರ ಆರ್.ಚಂದ್ರಶೇಖರ್, ಶಿವಾಜಿನಗರ ಸುಹೈಲ್ ಅಹ್ಮದ್ ಅವರನ್ನು ಅಮಾನತು ಮಾಡಲಾಗಿದೆ’ ಎಂದರು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದೊಂದು ಸೇರಿದಂತೆ ನಾಲ್ಕು ತಂಡ ರಚನೆ ಮಾಡಲಾಗಿತ್ತು. ಜತೆಗೆ, ಅಪರ ಜಿಲ್ಲಾ ಚುನಾವಣಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಸದ್ಯ ತನಿಖೆಯ ವರದಿ ಬಿಬಿಎಂಪಿ ಕೈ ಸೇರಿದ್ದು, ಈ ಸಂಬಂಧ ಕರ್ತವ್ಯಲೋಪ ಹಿನ್ನೆಲೆ ಆರ್.ಒಗಳನ್ನು ಅಮಾನತು ಮಾಡಲಾಗಿದೆ’ ಎಂದು ಅವರು ವಿವರಿಸಿದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…