Latest

ಶಿಗ್ಗಾಂವಿಯಲ್ಲಿ ವಾಕರಸಾಸಂ ಬಸ್ ಅಪಘಾತ: 23 ಪ್ರಯಾಣಿಕರಿಗೆ ಗಂಭೀರ ಗಾಯ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಯಾನಕ ಬಸ್ ಅಪಘಾತದಲ್ಲಿ 23 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ವಾಕರಸಾಸಂ) ಬಸ್‌ವು ಹುಬ್ಬಳ್ಳಿ-ಹಾನಗಲ್ ಮಾರ್ಗದಲ್ಲಿ ಸಾಗುತ್ತಿತ್ತು. ಈ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು.

ಘಟನೆಯ ವಿವರಗಳ ಪ್ರಕಾರ, ಬಸ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದೆ. ಪರಿಣಾಮವಾಗಿ ವಾಹನ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಅಪಘಾತ ಸಂಭವಿಸಿದೆ. ಈ ಭೀಕರ ದೃಶ್ಯ ಸಮೀಪದ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಗಾಯಾಳುಗಳನ್ನು ತಕ್ಷಣ ಶಿಗ್ಗಾಂವಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಪಂದಿಸಿದ ಸ್ಥಳೀಯರು ಬಸ್‌ಗೆ ಓಡಿ ಹೋಗಿ, ಒಳಗಿನ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸುವಲ್ಲಿ ಸಹಾಯ ಮಾಡಿದ್ದಾರೆ.

ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ. ಚಾಲಕನ ಎಡವಟ್ಟಿನೆಂದು ಶಂಕೆ ವ್ಯಕ್ತವಾಗುತ್ತಿದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

4 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago