Latest

ಬೆಂಗಳೂರು ಆಟೋ ಚಾಲಕರಿಗೆ ಎಚ್ಚರಿಕೆ: ಜಾಹೀರಾತು ಅಂಟಿಸಿದರೆ ಕಠಿಣ ದಂಡ.!

ಬೆಂಗಳೂರು: ನಗರದಲ್ಲಿ ಆಟೋ ಚಾಲಕರಿಗೆ ಸಾರ್ವಜನಿಕ ಖಾಸಗಿ ಕಂಪನಿಗಳ ಜಾಹೀರಾತುಗಳನ್ನಾ ಆಟೋಗಳ ಹಿಂಭಾಗದಲ್ಲಿ ಅಂಟಿಸುವುದು ಇನ್ನುಮೇಲೆ ದಂಡನೀಯ ಅಪರಾಧವಾಗಲಿದೆ. ನಿಯಮಿತ ಅನುಮತಿ ಇಲ್ಲದೆ ಜಾಹೀರಾತು ಹಾಕಿರುವ ಚಾಲಕರ ಮೇಲೆ ಸಾರಿಗೆ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರದಲ್ಲಿ ಹಲವು ಆಟೋಗಳಲ್ಲಿ “ಪ್ಲೇ ಗೇಮ್, ಶಾಪಿಂಗ್ ಆಪ್, ಇನ್ಸ್ಟಿಟ್ಯೂಟ್” ಮುಂತಾದ ಜಾಹೀರಾತು ಪೋಸ್ಟರ್‌ಗಳನ್ನು ಹಿಂಭಾಗದ ಗಾಜಿನಲ್ಲಿ ಅಥವಾ ಮೈದೆಯಲ್ಲಿ ಅಂಟಿಸಿಕೊಂಡು ಓಡಾಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಈ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಇಲಾಖೆ, ಕೆಲವೇ ದಿನಗಳಲ್ಲಿ ಹಲವು ಆಟೋಗಳಿಗೆ ದಂಡ ವಿಧಿಸಿದೆ.

ನಿಯಮದ ಪ್ರಕಾರ:

ಆಟೋಗಳಲ್ಲಿ ಜಾಹೀರಾತು ಪ್ರದರ್ಶಿಸಲು ಸರ್ಕಾರದಿಂದ ವಾರ್ಷಿಕ ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಆಟೋ ಚಾಲಕರು ವರ್ಷಕ್ಕೆ ₹5000 ರೂ. ಹಣವನ್ನು ತೆರಲಾಗುತ್ತದೆ. ಅನುಮತಿ ಇಲ್ಲದೆ ಜಾಹೀರಾತು ಹಾಕುವುದು ನಿಯಮ ಉಲ್ಲಂಘನೆಗೆ ಸಮಾನ, ಮತ್ತು ಇದರಿಂದ ಸಾರ್ವಜನಿಕ ವಾಹನದ ನಿಟ್ಟಿನಲ್ಲಿ ಸುರಕ್ಷತೆಗೂ ಧಕ್ಕೆಯಾಗುವ ಸಾಧ್ಯತೆ ಇದೆ.

ಸಾರಿಗೆ ಇಲಾಖೆ ಎಚ್ಚರಿಕೆ:

“ಯಾರೇ ಆಟೋ ಚಾಲಕರು ನಿರ್ಬಂಧವಿಲ್ಲದೆ ತಮ್ಮ ವಾಹನಗಳಲ್ಲಿ ಜಾಹೀರಾತುಗಳನ್ನು ಅಂಟಿಸಿಕೊಂಡು ಓಡಾಡಿದರೆ, ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಲಿದೆ. ಕಾನೂನನ್ನು ಮೀರಿ ಹಣದ ಆಸೆಗಾಗಿ ಜಾಹೀರಾತು ಹಾಕುವುದು ಗೌರವಯುತ ವ್ಯವಹಾರವಲ್ಲ,” ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

3 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

16 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

17 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago