ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದೇನೆ.
ಸಾರಿಗೆ ನೌಕರರ ಜೊತೆಗೆ ಒಂದು ಸುತ್ತಿನ ಮಾತುಕತೆ ಮಾಡಿದ್ದೇನೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಮಾತುಕತೆ ನಡೆಯುತ್ತಿದೆ. ಸಾರಿಗೆ ನೌಕರರು ಮುಷ್ಕರ ಮಾಡುವುದಿಲ್ಲ ಅನ್ನೋ ವಿಶ್ವಾಸವಿದೆ. ಸಿಎಂ ಜೊತೆಗೆ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತೇವೆ. ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗಲ್ಲ ಎಂದು ತಿಳಿಸಿದ್ದಾರೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರು ಮುಂದಾಗಿದ್ದಾರೆ. ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಅಂದಿನಿಂದ 23,000 ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ಹೇಳಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…