Categories: CrimeLatest

ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಸಿದ್ಧನಾದ ಭೂಪ, ಮಂಟಪಕ್ಕೆ ನುಗ್ಗಿ ಮೊದಲ ಪತ್ನಿ ಮಾಡಿದ ಕೆಲಸಕ್ಕೆ ಆಗಿದೆ ಬೇರೆ..?

ಉತ್ತರ ಪ್ರದೇಶ: ಕಾನೂನಾತ್ಮಕವಾಗಿ ವಿಚ್ಛೇದನ (ತಲಾಖ್) ನೀಡದೇ ರಹಸ್ಯವಾಗಿ ಎರಡನೇ ಮದುವೆಗೆ ಮುಂದಾಗಿದ್ದ ಪತಿಯ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ ನುಗ್ಗಿ ತಡೆದ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶ್ಯಾಮನಗರದಲ್ಲಿ ನಡೆದಿದೆ. ಈ ಘಟನೆಯಿಂದ ಮದುವೆ ಮಂಟಪದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿಯ ಪ್ರಕಾರ, ಆಶಿಫ್ ಎಂಬಾತ 2022ರಲ್ಲಿ ಪ್ರೇಮ ವಿವಾಹವಾಗಿದ್ದ. ಆದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಉಂಟಾದ ಹಿನ್ನೆಲೆಯಲ್ಲಿ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ನಡುವೆ ವಿಚ್ಛೇದನ ಸಂಬಂಧಿತ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಆಶಿಫ್ ಮತ್ತೊಂದು ಮದುವೆಗೆ ರಹಸ್ಯವಾಗಿ ಸಿದ್ಧತೆ ನಡೆಸಿದ್ದಾನೆ ಎನ್ನಲಾಗಿದೆ.

ಪತಿಯ ಎರಡನೇ ಮದುವೆಯ ವಿಷಯವನ್ನು ನೆರೆಹೊರೆಯವರಿಂದ ತಿಳಿದುಕೊಂಡ ಮೊದಲ ಪತ್ನಿ ಶುಕ್ರವಾರ ರಾತ್ರಿ ನೇರವಾಗಿ ಕಲ್ಯಾಣ ಮಂಟಪಕ್ಕೆ ತೆರಳಿ ಮದುವೆಯನ್ನು ತಡೆದಿದ್ದಾರೆ. ಈ ವೇಳೆ ಎರಡೂ ಕುಟುಂಬಗಳ ನಡುವೆ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಘಟನೆಯ ಮಾಹಿತಿ ತಿಳಿದ ಚಕೇರಿ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಆಶಿಫ್‌ನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

9 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

9 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago