ಬೆಂಗಳೂರು ನಗರದ ವೈಟ್‌ಫೀಲ್ಡ್ ಬಳಿ ನಗೋಂಡನಹಳ್ಳಿ ಪ್ರದೇಶದಲ್ಲಿ ಮನಕಲಕಿಸುವ ದುರಂತವೊಂದು ವರದಿಯಾಗಿದೆ. ತಾಯಿ ಮತ್ತು ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಆಂಧ್ರ ಪ್ರದೇಶ ಮೂಲದ ರಚಿತಾ ರೆಡ್ಡಿ (46) ಮತ್ತು ಅವರ ಮಗಳು ಶ್ರೀಜಾ ರೆಡ್ಡಿ (24) ಎಂದು ಗುರುತಿಸಲಾಗಿದೆ. ಇಬ್ಬರು ನಗೋಂಡನಹಳ್ಳಿಯ ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಮಗಳು ಶ್ರೀಜಾ ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಮೊದಲು ಶ್ರೀಜಾ ನೇಣುಬಿಗಿದು ಆತ್ಮಹತ್ಯೆಗೆ ಶರಣಾದರು. ಇದನ್ನು ಕಂಡ ತಾಯಿ ರಚಿತಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಸುದ್ದಿಯನ್ನು ತಮ್ಮ ಅಳಿಯನಿಗೆ ತಿಳಿಸಿದ ತಕ್ಷಣವೇ “ಬದುಕಲು ಇಚ್ಛೆ ಇಲ್ಲ” ಎಂದು ಹೇಳಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ವಿವರ ತಿಳಿಯುತ್ತಿದ್ದಂತೆಯೇ ವೈಟ್‌ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಈ ದುರಂತದಿಂದ ಸ್ಥಳೀಯರಲ್ಲೂ ಬೇಸರ ಮತ್ತು ತೀವ್ರ ಬೇಧನೆ ಮೂಡಿದೆ. ತಾಯಿ–ಮಗಳ ನಡುವೆ ಏನಾದರೂ ಸಮಸ್ಯೆ ಇದೆಯೇ ಎಂಬುದರ ಬಗ್ಗೆ ಪ್ರಶ್ನೆಗಳು ಕೇಳಿ ಬರುತ್ತಿವೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…