ಮೈಸೂರಿನಲ್ಲಿ ದಂಪತಿ ನಡುವಿನ ಕುಟುಂಬ ಕಲಹ ದಾರುಣ ಅಂತ್ಯ ಕಂಡಿದ್ದು, ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಉಂಟಾದ ಜಗಳದಲ್ಲಿ ಪತ್ನಿಯೇ ಗಂಡನನ್ನು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ.
ಸುಶೀಲಾ ಮತ್ತು ನಿತ್ಯಾನಂದ ಹಲವು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ದಂಪತಿಗೆ ಮಕ್ಕಳಾಗಿರಲಿಲ್ಲ. ಈ ವಿಚಾರವೇ ಇಬ್ಬರ ಮಧ್ಯೆ ಆಗಾಗ್ಗೆ ಕಲಹಕ್ಕೆ ಕಾರಣವಾಗುತ್ತಿತ್ತು ಎನ್ನಲಾಗಿದೆ.
ಸುಶೀಲಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರೆ, ನಿತ್ಯಾನಂದ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದನು ಎಂದು ತಿಳಿದುಬಂದಿದೆ. ಸಂಸಾರದ ಸಮಸ್ಯೆಗಳ ಜೊತೆಗೆ ಮಕ್ಕಳಾಗದ ವಿಚಾರದಿಂದ ದಂಪತಿ ನಡುವೆ ನಿರಂತರ ಜಗಳ ನಡೆಯುತ್ತಿತ್ತೆಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಕೂಡ ನಿತ್ಯಾನಂದ ಮದ್ಯಪಾನ ಮಾಡಿ ಮನೆಗೆ ಬಂದಿದ್ದಾನೆ. ಈ ವೇಳೆ ಮಾತಿನ ಚಕಮಕಿ ತೀವ್ರಗೊಂಡು ಜಗಳಕ್ಕೆ ತಿರುಗಿದೆ. ಕೋಪಗೊಂಡ ಸುಶೀಲಾ ಗಂಡನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.
ಘಟನೆಯ ನಂತರ ಪ್ರಕರಣವನ್ನು ಮರೆಮಾಚಲು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಲು ಯತ್ನಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಬೆಳಿಗ್ಗೆ ನಿತ್ಯಾನಂದನ ಸಹೋದರ ಮನೆಗೆ ಬಂದು ನೋಡಿದಾಗ ಕತ್ತಿನ ಭಾಗದಲ್ಲಿ ಗಾಯದ ಗುರುತುಗಳು ಕಂಡು ಅನುಮಾನ ವ್ಯಕ್ತಪಡಿಸಿದ್ದಾನೆ.
ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ವೇಳೆ ಘಟನೆಯ ನಿಜಾಂಶ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…