Categories: CrimeLatest

ನಾಮಕರಣ ತಡವಾಗಿ ಬಂದ ಪತ್ನಿ: ಮಗುವನ್ನು ನೆಲಕ್ಕೆ ಎಸೆದ ತಂದೆ, ತಲೆಬುರುಡೆ ಪುಡಿ..!

ಬೆಂಗಳೂರು: ನಾಮಕರಣ ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದನ್ನು ಕಾರಣವಾಗಿಸಿಕೊಂಡು ಆಕ್ರೋಶಗೊಂಡ ಪತಿಯೊಬ್ಬ, ತನ್ನ 11 ತಿಂಗಳ ಸ್ವಂತ ಮಗುವನ್ನೇ ಬಲವಂತವಾಗಿ ಕಸಿದು ನೆಲಕ್ಕೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಲೆಬುರುಡೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ನಗರದ ಕಲ್ಯಾಣ ಮಂಟಪವೊಂದರಲ್ಲಿ ಬೆಳಿಗ್ಗೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಆಕೆಯ ತವರು ಮನೆಯವರು ಸುಮಾರು ಒಂದು ಗಂಟೆ ತಡವಾಗಿ ಆಗಮಿಸಿದ್ದರಿಂದ ಪತಿ ತೀವ್ರ ಆಕ್ರೋಶಗೊಂಡಿದ್ದ ಎನ್ನಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಅತಿಥಿಗಳ ಸಮ್ಮುಖದಲ್ಲೇ ಪತಿ ಪತ್ನಿಯೊಂದಿಗೆ ವಾಗ್ವಾದ ಆರಂಭಿಸಿ, ಎಲ್ಲರ ಮುಂದೆ ತನ್ನನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಪತ್ನಿಯ ತಂದೆಯ ಮೇಲೂ ಆತ ಹಲ್ಲೆಗೆ ಯತ್ನಿಸಿದ್ದಾನೆ.

ಈ ವೇಳೆ ಮಾವನ ಕಂಕುಳಲ್ಲಿದ್ದ 11 ತಿಂಗಳ ಮಗುವನ್ನು ಬಲವಂತವಾಗಿ ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಪರಿಣಾಮ ಮಗು ತೀವ್ರವಾಗಿ ಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ. ಗಲಾಟೆ ತಡೆಯಲು ಮುಂದಾದ ಹೋಟೆಲ್ ಸಿಬ್ಬಂದಿಯ ಮೇಲೂ ಆರೋಪಿ ಹಲ್ಲೆ ನಡೆಸಿದ್ದು, ಓರ್ವ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಘಟನೆಯಲ್ಲಿ ಪ್ರಚೋದನೆ ನೀಡಿದ ಆರೋಪದಡಿ ಅತ್ತೆಯ ವಿರುದ್ಧ ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಗುವಿನ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

13 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

13 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago