ವಿಜಯಪುರದ ಆಲಕುಂಟೆ ನಗರದಲ್ಲಿ ಪತ್ನಿ, ಪತಿ ಮೇಲೆ ಕೊಲೆ ಮಾಡಲು ಯತ್ನಿಸಿದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ತೇಜು ರಾಠೋಡ್ ಎಂಬ ಮಹಿಳೆ, ತನ್ನ ಪತಿ ಅಜೀತ್ ರಾಠೋಡ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ.
ಘಟನೆಯ ವಿವರಗಳಲ್ಲಿ, ಅಜೀತ್ ಗಾಢ ನಿದ್ರೆಯಲ್ಲಿ ಇದ್ದ ಸಂದರ್ಭದಲ್ಲಿ ತೇಜು ಅವರು ಚಾಕುವಿನಿಂದ ಅವರ ಕತ್ತಿಗೆ ಇರಿದಿದ್ದಾರೆ. ತಕ್ಷಣವೇ ನೋವಿನಿಂದ ಕಿರುಚಿದ ಅಜೀತ್ ಶಬ್ದ ಕೇಳಿ, ಮನೆಯವರ ಗಮನ ಸೆಳೆದಿದ್ದು, ಅವರು ಕೂಡಲೇ ಅಜೀತ್ ರನ್ನು ನಗರ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ ಅಜೀತ್ ರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ.
ಘಟನೆಗೆ ಹಿನ್ನಲೆಯಲ್ಲಿ, ಪತಿ ಅಜೀತ್ ತೇಜುಗೆ ಆಕೆಯ ಮೊಬೈಲ್ ಬಳಕೆ ಕುರಿತಾಗಿ ಬುದ್ಧಿವಾದ ನೀಡಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ತೇಜು ಈ ದಾಳಿಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ತೇಜು ತಮ್ಮ ಮೊಬೈಲಿನಲ್ಲಿ ಅನ್ಯ ವ್ಯಕ್ತಿಗಳೊಂದಿಗೆ ನಿರಂತರ ಚಾಟಿಂಗ್ ಮಾಡುತ್ತಿದ್ದರಂತೆ. ಇದಕ್ಕೆ ತಡೆಯೊಡ್ಡಿದ ಅಜೀತ್ ರ ಕ್ರಮಕ್ಕೆ ತೇಜು ಆಕ್ರೋಶಗೊಂಡು ಈ ವಿಚಿತ್ರ ಕೃತ್ಯಕ್ಕೆ ಕೈ ಹಾಕಿದ್ದಾಳೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…