ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಯನ್ನು ಹತ್ಯೆ ಮಾಡಿದ್ದ ಗಂಭೀರ ಪ್ರಕರಣದಲ್ಲಿ, ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ₹1.85 ಲಕ್ಷ ದಂಡ ಕೂಡಾ ವಿಧಿಸಿದೆ.
ತುಮ್ಮಳ್ಳಿಯ ನಿವಾಸಿ ಕರುಣಾಕರ್ (36) ಎಂಬವರು 2022ರ ಸೆಪ್ಟೆಂಬರ್ 20ರಂದು ತನ್ನ ಪತ್ನಿ ಅಮಿತಾ (27) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಪತ್ನಿ ಅಮಿತಾ ಅವರಿಗೆ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಕೊನೆಗೆ ಕೊಲೆ ಮಾಡಿ ಓಡಿಹೋಗಿದ್ದ.
ಈ ಕುರಿತು ಅಮಿತಾ ಅವರ ತಾಯಿ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಮೇಲೆ ಪ್ರಕರಣ ದಾಖಲಾಗಿತ್ತು. ನಂತರ ತನಿಖೆಗೆ ಕಸರುಮಾಡಿದ್ದ ಅಂದಿನ ಇನ್‌ಸ್ಪೆಕ್ಟರ್ ಬಿ. ಮಂಜುನಾಥ್ ಹಾಗೂ ಡಿವೈಎಸ್ಪಿ ಬಾಲರಾಜ್ ಅವರು ಆರೋಪಿಗೆ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಆರ್. ಪಲ್ಲವಿ, ಪ್ರಕರಣದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಕರುಣಾಕರ್ ವಿರುದ್ಧ ಜೀವಾವಧಿ ಶಿಕ್ಷೆ ಹಾಗೂ ₹1.85 ಲಕ್ಷ ದಂಡ ವಿಧಿಸಿದರು. ಈ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿ ಪಿ.ಒ. ಪುಷ್ಪಾ ವಾದ ಮಂಡಿಸಿದ್ದರು.
ನ್ಯಾಯಾಲಯದ ತೀರ್ಪು ವರದಕ್ಷಿಣೆಗಾಗಿ ನಡೆಯುವ ಕ್ರೂರತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಈ ತೀರ್ಪು ಇತರರಿಗೆ ಎಚ್ಚರವಾಗಲಿ ಎಂಬುದೇ ನ್ಯಾಯಮೂರ್ತಿಯ ಉದ್ದೇಶ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…