Categories: CrimeLatest

ಪ್ರಿಯಕರನಿಗೆ ಲೈವ್ ಲೊಕೇಶನ್ ಕಳುಹಿಸಿ ಗಂಡನ ಹತ್ಯೆಗೆ ಸ್ಕೆಚ್..! ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪತ್ನಿಯ ಭೀಕರ ಸಂಚು ಬಯಲು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸಂಚು ರೂಪಿಸಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನಕ್ಕೆ ಹೋಗುವ ನೆಪದಲ್ಲಿ ಪತಿಯನ್ನು ಕರೆದುಕೊಂಡು ಹೋಗಿದ್ದ ಮಹಿಳೆ, ಪ್ರಯಾಣದ ಪ್ರತಿಯೊಂದು ಹಂತದಲ್ಲೂ ಲೈವ್ ಲೊಕೇಶನ್ ಅನ್ನು ಪ್ರಿಯಕರನಿಗೆ ಕಳುಹಿಸಿ ಕೊಲೆ ನಡೆಸಲು ಸಹಕರಿಸಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಹಾಸಿನಿ, ಆಕೆಯ ಪ್ರಿಯಕರ ಯುಗಂಧರ್ ಹಾಗೂ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶೂಳಗಿರಿಯ ನಿವಾಸಿ ರಮೇಶ್ (23) ಮತ್ತು ಹಾಸಿನಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಬ್ಬಳು ಮಗಳಿದ್ದಾಳೆ. ಆದರೆ ಮದುವೆಗೂ ಮುನ್ನದಿಂದಲೇ ಹಾಸಿನಿ ಮತ್ತು ಬಾಲ್ಯದ ಗೆಳೆಯ ಯುಗಂಧರ್ ನಡುವೆ ಪ್ರೇಮ ಸಂಬಂಧವಿದ್ದು, ಮದುವೆಯಾದ ಬಳಿಕವೂ ಅದು ಮುಂದುವರಿದಿತ್ತು ಎನ್ನಲಾಗಿದೆ. ಪತಿಯ ಅಡ್ಡಿ ದೂರವಾದರೆ ಪ್ರಿಯಕರನೊಂದಿಗೆ ಬದುಕಬಹುದು ಎಂಬ ಉದ್ದೇಶದಿಂದ ಇಬ್ಬರೂ ಸೇರಿ ಕೊಲೆಯ ಸಂಚು ರೂಪಿಸಿದ್ದರು.

ಅದರಂತೆ ಅಮಾವಾಸ್ಯೆಯ ದಿನ ಶ್ರೀ ಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗೋಣ ಎಂದು ಹಾಸಿನಿ ಪತಿಯನ್ನು ಒಪ್ಪಿಸಿ, ಮಗಳೊಂದಿಗೆ ಬೈಕ್‌ನಲ್ಲಿ ಹೊರಟಿದ್ದಳು. ದಾರಿಯುದ್ದಕ್ಕೂ ತನ್ನ ಮೊಬೈಲ್ ಮೂಲಕ ಲೈವ್ ಲೊಕೇಶನ್ ಅನ್ನು ಪ್ರಿಯಕರ ಯುಗಂಧರ್‌ಗೆ ಹಂಚಿಕೊಂಡಿದ್ದಾಳೆ. ಗುಡುಪಲ್ಲೆ ಮಂಡಲದ ಮಲ್ಲಪ್ಪಕೊಂಡ ಬೆಟ್ಟದ ಮೂರನೇ ಹೇರ್‌ಪಿನ್ ತಿರುವಿನ ಬಳಿ ತಲುಪಿದಾಗ, ತನ್ನ ಹ್ಯಾಂಡ್‌ಬ್ಯಾಗ್ ಕೆಳಗೆ ಬಿದ್ದಿದೆ ಎಂದು ಹೇಳಿ ಬೈಕ್ ನಿಲ್ಲಿಸುವಂತೆ ಕೇಳಿದ್ದಾಳೆ.

ಇದನ್ನೇ ಅವಕಾಶವನ್ನಾಗಿ ಮಾಡಿಕೊಂಡು ಲೈವ್ ಲೊಕೇಶನ್ ಹಿಂಬಾಲಿಸಿ ಅಲ್ಲಿಗೆ ಬಂದಿದ್ದ ಯುಗಂಧರ್ ಹಾಗೂ ಆತನ ಸ್ನೇಹಿತರು ರಮೇಶ್‌ನನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆ ವೇಳೆ ದಂಪತಿಯ ಪುಟ್ಟ ಮಗಳು ಸಹ ಸ್ಥಳದಲ್ಲೇ ಇದ್ದಳು ಎನ್ನಲಾಗಿದೆ.

ರಮೇಶ್ ಮತ್ತು ಹಾಸಿನಿ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಹಾಸಿನಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ದೇವಸ್ಥಾನದ ಮಾರ್ಗದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಮೇಶ್ ಜೊತೆ ತೆರಳಿದ್ದ ಹಾಸಿನಿ ನಂತರ ಬೇರೆ ವ್ಯಕ್ತಿಗಳೊಂದಿಗೆ ಹಿಂದಿರುಗುತ್ತಿರುವ ದೃಶ್ಯಗಳು ಪತ್ತೆಯಾಗಿವೆ. ಬಳಿಕ ಮೊಬೈಲ್ ಕರೆ ವಿವರಗಳು ಹಾಗೂ ಲೊಕೇಶನ್ ಮಾಹಿತಿ ಆಧರಿಸಿ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಿದಾಗ ರಮೇಶ್‌ನ ಮೃತದೇಹ ಪತ್ತೆಯಾಯಿತು.

ಹಾಸಿನಿಯ ಮೊಬೈಲ್ ಪರಿಶೀಲಿಸಿದ ವೇಳೆ ಪ್ರಿಯಕರನಿಗೆ ಲೈವ್ ಲೊಕೇಶನ್ ಕಳುಹಿಸಿರುವುದು ಹಾಗೂ ಕೊಲೆ ಸಂಚಿನಲ್ಲಿ ಆಕೆಯ ಪಾತ್ರವಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಾಸಿನಿ, ಯುಗಂಧರ್ ಹಾಗೂ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

1 day ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago