ಚಿಂತಾಮಣಿ: ನಗರದ ಜೆಜೆ ಕಾಲೋನಿಯಲ್ಲಿ ನಡೆದಿದ್ದ ಇಬ್ಬರು ಸಹೋದರಿಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಮಾಹಿತಿ ಬೆಳಕಿಗೆ ಬಂದಿದೆ. ತವರು ಮನೆಗೆ ತೆರಳಿದ್ದ ಪತ್ನಿ ಮತ್ತೆ ಮನೆಗೆ ಬರಲು ನಿರಾಕರಿಸಿದ್ದರಿಂದ ಕೋಪಗೊಂಡ ಪತಿ, ಪತ್ನಿ ಹಾಗೂ ಆಕೆಯ ತಂಗಿಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಮೃತ ಶಮಾ ಮತ್ತು ಏಜಾಜ್ ಸುಮಾರು ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಶಮಾ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದಳು. ನಂತರ ಹಲವು ಬಾರಿ ಮನೆಗೆ ಮರಳುವಂತೆ ಏಜಾಜ್ ಮನವಿ ಮಾಡಿದ್ದರೂ, ಶಮಾ ಅದನ್ನು ಒಪ್ಪಿರಲಿಲ್ಲ ಎನ್ನಲಾಗಿದೆ.
ಸೋಮವಾರ ಮುಂಜಾನೆ ಕೋಲಾರದಿಂದ ಚಿಂತಾಮಣಿಗೆ ಬಂದಿದ್ದ ಏಜಾಜ್, ಜೆಜೆ ಕಾಲೋನಿಯಲ್ಲಿರುವ ಮನೆಯೊಳಗೆ ನುಗ್ಗಿ ಮಲಗಿದ್ದ ಪತ್ನಿ ಶಮಾಳನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಅಲ್ಲೇ ಇದ್ದ ಶಮಾಳ ತಂಗಿ ರೇಷ್ಮಾಳ ಮೇಲೂ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯನ್ನೂ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಏಜಾಜ್‌ನ ಪತ್ತೆಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…