Latest

ಸಿಂಧನೂರು ನಗರದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಐದು ಮಂದಿ ಕಂದಾಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮಂದಿ ಕಂದಾಯ ಇಲಾಖೆ ನೌಕರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯ ದೂರಿನಂತೆ, ಮಿನಿ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಸಹಾಯಕ ಮತ್ತು ನಾಲ್ವರು ಗ್ರಾಮ ಆಡಳಿತ ಅಧಿಕಾರಿಗಳು ಸೇರಿ ಆರೋಪಿಗಳು ಅನಾಚಾರ ಎಸಗಿದ್ದಾರೆ. ಸಿಂಧನೂರು ನಗರ ಶಹರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಗಳ ಮದುವೆಗೆ ಖರ್ಚು ಮಾಡಬೇಕಾಗಿ ಮಹಿಳೆ ತನ್ನ ಜಮೀನನ್ನು ಅಡಮಾನವಿಟ್ಟು ನಾಲ್ಕು ಲಕ್ಷ ರೂಪಾಯಿ ಸಾಲ ಪಡೆದಿದ್ದಳು. ಈ ಹಣವನ್ನು ಮರಳಿ ನೀಡಲು ಎಪಿಎಂಸಿ ಬಳಿ ಇರುವ ಖಾಸಗಿ ಕೊಠಡಿಗೆ ಹೋದ ಸಂದರ್ಭದಲ್ಲಿ ಆರೋಪಿಗಳು ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆಂದು ಆರೋಪಿಸಲಾಗಿದೆ.

“ನನ್ನ ಹೆಸರಿನಲ್ಲಿ ಬೆಲೆಯ ಜಮೀನು ಇದ್ದದ್ದು ತಿಳಿದ ಆರೋಪಿಗಳು ಜಮೀನು ಖರೀದಿ ಹೆಸರಿನಲ್ಲಿ ಕರಾರು ಪತ್ರ ಬರೆಸಿ, ಸಾಲ ನೀಡಿದರು. ಕರಾರು ಪತ್ರದಲ್ಲಿ ತಮ್ಮನ್ನು ಕೃಷಿಕರೆಂದು ಗುರುತಿಸಿಕೊಂಡಿದ್ದರು, ಆದರೆ ಇವರು ಸರ್ಕಾರಿ ನೌಕರರು” ಎಂದು ಮಹಿಳೆ ದೂರು ದಾಖಲಿಸಿದ್ದಾರೆ.

ಹಣವನ್ನು ಹಿಂತಿರುಗಿಸಲು ಹೋದಾಗ, ಆರೋಪಿಗಳು ಅವಾಚ್ಯ ಪದಗಳನ್ನು ಬಳಸಿದ್ದಲ್ಲದೆ, ಲೈಂಗಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಜಭಕ್ಷಿ ಎಂಬ ಕಿರಿಯ ಸಹಾಯಕ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಮಲ್ಲಿಕಾರ್ಜುನ ಗಡೇದ್, ಬಂದೇನವಾಜ್ ನಿಡಗುಂದಿ, ಮೃತ್ಯುಂಜಯ ಮತ್ತು ಆನಂದ್ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತವಾದ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago