Latest

ವಾಹನ ಓವರ್ ಟೇಕ್ ಮಾಡಿದ್ದಕ್ಕೆ ಮಹಿಳೆ ಮೇಲೆ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

ವಾಹನವನ್ನು ಓವರ್ ಟೇಕ್ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರ‌ ಮೇಲೆ ವಾಹನ ಚಾಲಕ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದಾನೆ. ಈ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ವಾಹನ ಚಾಲಕನ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ಚಾಲಕ ಥಳಿಸಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿರುವುದರಿಂದ ಅನೇಕರು ಚಾಲಕನನ್ನು ದೂಷಿಸುತ್ತಿದ್ದು ಆತನ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಶಿವಸೇನಾ ನಾಯಕಿ ಶಿಲ್ಪಾ ಬೋಡ್ಖೆ, ” ವಾಹನವನ್ನು ಹಿಂದಿಕ್ಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಮಹಿಳೆಯೊಬ್ಬರನ್ನು ಥಳಿಸಿದ ನಾಚಿಕೆಗೇಡಿನ ಘಟನೆಯೊಂದು ಭರ್ ಚೌಕ್‌ನಲ್ಲಿ ನಡೆದಿದೆ. ಗೃಹ ಸಚಿವ ದೇವೇಂದ್ರ ಫಡ್ನವೀಸ್ ಜಿ ಇದು ನಮ್ಮ ನಾಗ್ಪುರದಲ್ಲಿ ನಡೆದಿದೆ. ಈಗ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಎಲ್ಲೆಡೆ ಆಚರಿಸಲಾಯಿತು. ಇಲ್ಲಿ ಮಹಿಳೆಯರಿಗೆ ಗೌರವವನ್ನು ನೋಡಿ, ಅದು ಎಷ್ಟು ಸುರಕ್ಷಿತವಾಗಿದೆ ಎಂದು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.
ವರದಿಯೊಂದರ ಪ್ರಕಾರ, ಈ ಘಟನೆ ಜಾರಿಪಟ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಕೂಟಿಯಲ್ಲಿದ್ದ ಮಹಿಳೆ ಮತ್ತು ಟ್ಯಾಕ್ಸಿ ಚಾಲಕನ ನಡುವೆ ವಾಗ್ವಾದ ನಡೆದಿದೆ. ಮಧ್ಯಾಹ್ನ 1 ಗಂಟೆಗೆ ಇಂದೋರಾ ಚೌಕ್‌ನಿಂದ ಭೀಮ್ ಚೌಕ್‌ಗೆ ಹೋಗುವ ರಸ್ತೆಯಲ್ಲಿ ಮಹಿಳೆ ಶಿವಶಂಕರ್ ಶ್ರೀವಾಸ್ತವ ಎಂದು ಗುರುತಿಸಲಾದ ಟ್ಯಾಕ್ಸಿ ಚಾಲಕನನ್ನು ಹಿಂದಿಕ್ಕಿದ್ದಾಳೆ ಎಂದು ವರದಿಯಾಗಿದೆ.
ಇದರಿಂದ ಕೆರಳಿದ ಟ್ಯಾಕ್ಸಿ ಚಾಲಕನು ಮಹಿಳೆಯನ್ನು ನಿಂದಿಸಿದನು. ಇದನ್ನು ಪ್ರಶ್ನಿಸಿದ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದನು. ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago