Categories: Latest

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ ಎದುರು ಮಹಿಳಾ ಕಾನ್‌ಸ್ಟೇಬಲ್ ಅಸಭ್ಯವಾಗಿ ವರ್ತಿಸಿದ ಫೋಟೋ ವೈರಲ್ ಆದ ಬೆನ್ನಲ್ಲೇ ಸಂಬಂಧಿತ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಮಹಿಳಾ ಕಾನ್‌ಸ್ಟೇಬಲ್ ಅನ್ನು ರೀನಾ ಗರ್ಗ್ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ವಯೋವೃದ್ಧ ವ್ಯಕ್ತಿಯೊಬ್ಬರು ತಮ್ಮ ಸಮಸ್ಯೆಗೆ ಸಂಬಂಧಿಸಿದಂತೆ ದೂರು ನೀಡಲು ಬಿಚ್ಚಿವಾಡ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ರೀನಾ ಗರ್ಗ್, ದೂರನ್ನು ಆಲಿಸುವ ಬದಲು ಮೇಜಿನ ಮೇಲೆ ಎರಡೂ ಕಾಲುಗಳನ್ನು ಇಟ್ಟುಕೊಂಡು ಕುಳಿತಿರುವುದು ಫೋಟೋದಲ್ಲಿ ಕಂಡುಬಂದಿದೆ.

ವೃದ್ಧ ವ್ಯಕ್ತಿಯ ಎದುರು ಕನಿಷ್ಠ ಗೌರವವೂ ತೋರಿಸದ ರೀತಿಯಲ್ಲಿ ವರ್ತಿಸಿರುವುದನ್ನು ಅಲ್ಲಿದ್ದ ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಫೋಟೋ ವೈರಲ್ ಆದ ಬಳಿಕ ಸಾರ್ವಜನಿಕರು ಪೊಲೀಸರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಲವರು ಇದನ್ನು ಅಧಿಕಾರದ ದುರುಪಯೋಗ ಹಾಗೂ ಸಾರ್ವಜನಿಕರ ಅವಮಾನ ಎಂದು ಟೀಕಿಸಿದರು.

ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಡುಂಗರಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಹಾಗೂ ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಕಾನ್‌ಸ್ಟೇಬಲ್ ರೀನಾ ಗರ್ಗ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಘಟನೆ, ಸಾರ್ವಜನಿಕ ಸೇವೆಯಲ್ಲಿ ಇರುವ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆಯಬಾರದು ಎಂಬ ಸಂದೇಶ ನೀಡುವುದರ ಜೊತೆಗೆ, ಸೋಷಿಯಲ್ ಮೀಡಿಯಾ ಇಂದಿನ ದಿನಗಳಲ್ಲಿ ಹೊಣೆಗಾರಿಕೆಯನ್ನು ನೆನಪಿಸುವ ಪ್ರಬಲ ವೇದಿಕೆಯಾಗಿರುವುದನ್ನೂ ಮತ್ತೊಮ್ಮೆ ಸಾಬೀತುಪಡಿಸಿದೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago