ನಂಜನಗೂಡು ಪಟ್ಟಣದಲ್ಲಿ ಭೀಕರ ಅಪಘಾತ ಜರುಗಿದ್ದು, ಅಕ್ಕಿ ಸಾಗಾಣಿಕೆಯ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಜರುಗಿದೆ. ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ೩೦ ವರ್ಷದ ಭವಾನಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದು, ಅಪಘಾತದಲ್ಲಿ ಗಂಡ ಮಹೇಶ್ ಗಂಭಿರ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಆರ್‌ಪಿ ರಸ್ತೆಯ ೧೫ನೇ ತಿರುವಿನಲ್ಲಿ ಸರಿ ಸುಮಾರು ೧೨ ಗಂಟೆ ಹೊತ್ತಿಗೆ ಈ ಘಟನೆ ಜರುಗಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ಭವಾನಿಯ ಮೆದುಳು ಛಿದ್ರ ಛಿದ್ರವಾಗಿದೆ. ಗಂಡ ಮಹೇಶ್ ಜೊತೆ ಡಿಯೋ ದ್ವಿಚಕ್ರ ವಾಹನದಲ್ಲಿ ಬದನವವಾಳುವಿನಿಂದ ನಂಜನಗೂಡಿಗೆ ಆಗಮಿಸುತ್ತಿದ್ದ ವೇಳೆ ಆಯಾತಪ್ಪಿ ಬಿದ್ದ ಭವಾನಿ ತಮಿಳುನಾಡು ರಿಜಿಸ್ಟರೇಷನ್ ಹೊಂದಿರುವ ಟಿಎನ್ ೭೦ಆರ್ ೬೬೧೫ ಸಂಖ್ಯೆಯ ಅಕ್ಕಿ ಸಾಗಾಣಿಕೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಲಾರಿ ಭಾರೀ ತೂಕವಿದ್ದ ಕಾರಣ, ಲಾರಿ ಚಕ್ರ ತಲೆ ಮೇಲೆ ಹರಿದು ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಜರುಗಿದ ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಕೆಲ ಕಾಲ ಟ್ರಾಪಿಕ್ ಜಾಮ್ ಕೂಡ ಉಂಟಾಗಿತ್ತು. ಸ್ಥಳಕ್ಕೆ ಬಂದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭವಾನಿ ಕುಟುಂಬಸ್ಥರು, ಅಪಘಾತದ ಭೀಕರ ದೃಶ್ಯ ನೋಡಿ, ಗೋಳಾಡುತ್ತಿದ್ದ ದೃಶ್ಯ ನೋಡುಗರನ್ನು ಮಮ್ಮುಲ ಮರುಗುವಂತೆ ಮಾಡಿತ್ತು. ವರದಿ: ಮೋಹನ್
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…