Categories: Latest

ನಂಜನಗೂಡು ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದಾರುಣ ಸಾವು

ನಂಜನಗೂಡು ಪಟ್ಟಣದಲ್ಲಿ ಭೀಕರ ಅಪಘಾತ ಜರುಗಿದ್ದು, ಅಕ್ಕಿ ಸಾಗಾಣಿಕೆಯ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಜರುಗಿದೆ. ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ೩೦ ವರ್ಷದ ಭವಾನಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದು, ಅಪಘಾತದಲ್ಲಿ ಗಂಡ ಮಹೇಶ್‌ ಗಂಭಿರ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಆರ್‌ಪಿ ರಸ್ತೆಯ ೧೫ನೇ ತಿರುವಿನಲ್ಲಿ ಸರಿ ಸುಮಾರು ೧೨ ಗಂಟೆ ಹೊತ್ತಿಗೆ ಈ ಘಟನೆ ಜರುಗಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ಭವಾನಿಯ ಮೆದುಳು ಛಿದ್ರ ಛಿದ್ರವಾಗಿದೆ. ಗಂಡ ಮಹೇಶ್‌ ಜೊತೆ ಡಿಯೋ ದ್ವಿಚಕ್ರ ವಾಹನದಲ್ಲಿ ಬದನವವಾಳುವಿನಿಂದ ನಂಜನಗೂಡಿಗೆ ಆಗಮಿಸುತ್ತಿದ್ದ ವೇಳೆ ಆಯಾತಪ್ಪಿ ಬಿದ್ದ ಭವಾನಿ ತಮಿಳುನಾಡು ರಿಜಿಸ್ಟರೇಷನ್‌ ಹೊಂದಿರುವ ಟಿಎನ್‌ ೭೦ಆರ್‌ ೬೬೧೫ ಸಂಖ್ಯೆಯ ಅಕ್ಕಿ ಸಾಗಾಣಿಕೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಲಾರಿ ಭಾರೀ ತೂಕವಿದ್ದ ಕಾರಣ, ಲಾರಿ ಚಕ್ರ ತಲೆ ಮೇಲೆ ಹರಿದು ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಜರುಗಿದ ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಕೆಲ ಕಾಲ ಟ್ರಾಪಿಕ್‌ ಜಾಮ್‌ ಕೂಡ ಉಂಟಾಗಿತ್ತು. ಸ್ಥಳಕ್ಕೆ ಬಂದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭವಾನಿ ಕುಟುಂಬಸ್ಥರು, ಅಪಘಾತದ ಭೀಕರ ದೃಶ್ಯ ನೋಡಿ, ಗೋಳಾಡುತ್ತಿದ್ದ ದೃಶ್ಯ ನೋಡುಗರನ್ನು ಮಮ್ಮುಲ ಮರುಗುವಂತೆ ಮಾಡಿತ್ತು. ವರದಿ: ಮೋಹನ್

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

18 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago