ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಖಾಸಗಿ ವೇರ್‌ಹೌಸ್ ಕಚೇರಿಯಲ್ಲಿ ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಮಹಿಳೆಯ ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದ ಪುರುಷ ಸಹೋದ್ಯೋಗಿ, ಆಕೆಗೆ ಲಿಪ್ ಕಿಸ್ ನೀಡಲು ಯತ್ನಿಸಿದ್ದಾನೆ.
ಈ ಘಟನೆ ಕಚೇರಿಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ನಂತರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಗಮನಕ್ಕೆ ಬಂದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ತುಡಿಯಲೂರು ಪ್ರದೇಶದಲ್ಲಿರುವ ಈ ಕಚೇರಿಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ಪುರುಷ ಉದ್ಯೋಗಿ ಆಕೆಯ ಬಳಿಗೆ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ. ಆರಂಭದಲ್ಲಿ ಆತನ ಉದ್ದೇಶ ಅರಿಯದ ಮಹಿಳೆ, ಆತ ಮುಖದ ಹತ್ತಿರ ಬಂದು ಕಿಸ್ ಮಾಡಲು ಯತ್ನಿಸಿದಾಗ ಎಚ್ಚೆತ್ತುಕೊಂಡು ತಕ್ಷಣವೇ ಅವನನ್ನು ತಳ್ಳಿ ದೂರ ಸರಿದಳು. ಬಳಿಕ ಕೋಪದಿಂದ ಎಚ್ಚರಿಕೆ ನೀಡಿದಳು.
ಘಟನೆಯ ನಂತರ ವಿಷಯವನ್ನು ಬಹಿರಂಗಪಡಿಸದಂತೆ ಆರೋಪಿಯು ಮನವಿ ಮಾಡಿದರೂ, ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ 28 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
ಮಹಿಳೆಯರ ಮೇಲೆ ಕೆಲಸದ ಸ್ಥಳಗಳಲ್ಲಿ ನಡೆಯುವ ಕಿರುಕುಳವನ್ನು ತಡೆಯಲು POSH ಕಾಯ್ದೆ ಜಾರಿಯಲ್ಲಿದ್ದರೂ, ಇಂತಹ ಘಟನೆಗಳು ಮುಂದುವರಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…