Categories: CrimeLatest

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ ಬಳಿಕ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಯುವಕನೊಬ್ಬ ಯುವತಿಯನ್ನು ಪದೇಪದೇ ಅನುಚಿತವಾಗಿ ಮುಟ್ಟಿದ್ದಾನೆ ಎನ್ನಲಾಗಿದೆ.

ಯುವಕನ ಕೈಯಲ್ಲಿ ಐಫೋನ್ ಇದ್ದರೂ, ಆತನ ವರ್ತನೆ ಮಾತ್ರ ಅಸಭ್ಯವಾಗಿತ್ತು. ಕೆಲ ಬಾರಿ ಕಿರುಕುಳ ನೀಡಿದ ಬಳಿಕ ಯುವತಿ ಭಯಪಡದೆ ಧೈರ್ಯದಿಂದ ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ದಾಖಲಿಸಿಕೊಂಡಿದ್ದಾರೆ.

ಸುಮಾರು 9 ಕಿಲೋಮೀಟರ್ ಪ್ರಯಾಣದ ಬಳಿಕ ಬಸ್ ನಿಲ್ದಾಣ ತಲುಪುತ್ತಿದ್ದಂತೆ ಯುವತಿ ನಡೆದ ಘಟನೆಯ ಬಗ್ಗೆ ಕಂಡಕ್ಟರ್‌ಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಮಧ್ಯಪ್ರವೇಶಿಸಿದ ಕಂಡಕ್ಟರ್, ಯುವಕನನ್ನು ಬಸ್‌ನಿಂದ ಕೆಳಗಿಳಿಸಿದ್ದಾರೆ.

ಈ ವೇಳೆ ಕಂಡಕ್ಟರ್, ತಾವು ಸುಮಾರು 15 ವರ್ಷಗಳಿಂದ ಬಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಮಹಿಳೆಯರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.

ಕೈಯಲ್ಲಿ ದುಬಾರಿ ಮೊಬೈಲ್ ಅಥವಾ ಯಾವುದೇ ವಸ್ತು ಇದ್ದ ಮಾತ್ರಕ್ಕೆ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಹಕ್ಕು ಯಾರಿಗೂ ಇರುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಗೌರವವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ.

ಇಂತಹ ಘಟನೆ ಎದುರಾದಾಗ ಸಾಧ್ಯವಾದಷ್ಟು ಸುರಕ್ಷಿತವಾಗಿ ಸಾಕ್ಷ್ಯ ದಾಖಲಿಸಿಕೊಂಡು, ಬಸ್ ಸಿಬ್ಬಂದಿ ಅಥವಾ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವುದು ಅಗತ್ಯ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

23 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago